spot_img
Friday, April 3, 2026
spot_img

ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆ: ಮೀನುಗಾರರಿಗೆ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ

ಕುಂದಾಪುರ : ಮೀನುಗಾರರಿಗೆ ಮೋಟಾರ್, ಬಲೆ, ಮತ್ತಿತರ ಸಲಕರಣೆಗಳನ್ನು ಖರೀದಿಸಲು ಸರಕಾರ ವಿವಿಧ ಯೋಜನೆಯಡಿ ಕೆನರಾ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ವಿತರಿಸಲಾಗುತ್ತಿದೆ. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ ೫೦ ಸಾವಿರದಿಂದ ಸಾಲ ಸೌಲಭ್ಯ ನೀಡಲಾಗುತ್ತದೆ. ಸ್ವಸಹಾಯ ಸಂಘಗಳ ಮೂಲಕ ಸ್ತ್ರೀಶಕ್ತಿ ಯೋಜನೆಯಡಿ ಸ್ವ ಉದ್ಯೋಗ ನಡೆಸಲು ಆರ್ಥಿಕ ಸಹಾಯವನ್ನು ಬ್ಯಾಂಕ್ ಮೂಲಕ ಒದಗಿಸಲಾಗುತ್ತದೆ ಎಂದು ಕೆನರಾ ಬ್ಯಾಂಕಿನ ಉಡುಪಿ ವೃತ್ತ ಕಚೇರಿಯ ಎಜಿ‌ಎಂ ಟಿ.ಎ.ಎಸ್.ಪೂರ್ಣಾನಂದ ಹೇಳಿದರು.

ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆ ವತಿಯಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆದ ಮೀನುಗಾರರಿಗೆ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಅರ್ಹ ಮೀನುಗಾರ ಫಲಾನುಭವಿಗಳಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅರ್ಹ ಮೀನುಗಾರ ಫಲಾನುಭವಿಗಳಿಗೆ ಸಾಲ ವಿತರಿಸಿ ಮಾತನಾಡಿದ ಕೆನರಾ ಬ್ಯಾಂಕಿನ ಉಡುಪಿ ವೃತ್ತ ಕಚೇರಿಯ ಡಿಜಿ‌ಎಂ ಪಬಿತ್ರ ಕುಮಾರದಾಸ್ ಅವರು ಬ್ಯಾಂಕಿನಿಂದ ಮೀನುಗಾರರಿಗೆ ದೊರಕುವ ಸೌಲಭ್ಯಗಳ ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಪ್ರಗತಿ ಸಾಧಿಸುವಂತೆ ಕರೆ ನೀಡಿದರು.

ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ತಬ್ರೇಜ್, ಪಿಡಿ‌ಒ ಶೋಭಾ, ಕೆನರಾ ಬ್ಯಾಂಕಿನ ಗಂಗೊಳ್ಳಿ ಶಾಖೆ ಹಿರಿಯ ಪ್ರಬಂಧಕ ವಾಸು ದೇವಾಡಿಗ, ಗುಜ್ಜಾಡಿ ಶಾಖೆಯ ಪ್ರಬಂಧಕಿ ಆರತಿ ಪಾಟೀಲ್, ಮರವಂತೆ ಶಾಖೆ ಪ್ರಬಂಧಕ ಅಂಬೇಡ್ಕರ್ ಚೈತನ್ಯ ಮತ್ತಿತರರು ಉಪಸ್ಥಿತರಿದ್ದರು.

ಗಂಗೊಳ್ಳಿ ಶಾಖೆಯ ಸಹಾಯಕ ಪ್ರಬಂಧಕ ಮಂಜುನಾಥ ಆರ್.ಆರ್. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಸಂಜೀವ ಅರಕೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!