spot_img
Tuesday, April 28, 2026
spot_img

ಕೋಟ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಅಭಿವಿನ್ಯಾಸ ಕಾರ್ಯಕ್ರಮ

ಕೋಟ: ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಇಲ್ಲಿ ಐ.ಕ್ಯೂ.ಎ.ಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮ ಜರಗಿತು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಡಾ.ಮಹೇಶ್ ಕುಮಾರ್ ಅವರು ರಾಷ್ಟ್ರೀಯ ಸೇವಾ ಯೋಜನೆಯು ಗಾಂಧೀಜಿಯವರ ಸ್ವರಾಜ್ಯದ ಕನಸಿನ ಕೂಸಾಗಿದೆ. ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಯುವಜನಾಂಗ ಅದರಲ್ಲೂ ವಿದ್ಯಾರ್ಥಿಗಳು ಹೆಚ್ಚಾಗಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಳ್ಳಬೇಕು ಎಂಬುದಾಗಿ ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡರೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವುದರ ಜೊತೆಗೆ ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಇದೊಂದು ವೇದಿಕೆಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸದ್ಭಾವನಾ ದಿನದ ಅಂಗವಾಗಿ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನಾಜರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜಾತಿ,ಮತ,ಧರ್ಮ ಮತ್ತು ಭಾಷೆಯ ಭೇದವಿಲ್ಲದೇ ನಾವೆಲ್ಲರು ಭಾರತೀಯರು ಎಂಬುದನ್ನು ತಿಳಿಸುವುದರ ಜೊತೆಗೆ, ಇಲ್ಲಿ ಎಲ್ಲರು ಭಾವೈಕ್ಯತೆ ಮತ್ತು ಸೌಹಾರ್ದಯುತವಾಗಿ ಜೀವಿಸಬೇಕು ಎಂಬ ತತ್ವವನ್ನು ಪ್ರತಿಪಾದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್ ನಾಯಕ ಅವರು ವಹಿಸಿದ್ದರು. ವಿದ್ಯಾರ್ಥಿನಿಯಾದ ಕು.ತ್ರಿಶಾ ದ್ವಿತೀಯ ಬಿ.ಸಿ.ಎ ಅವರು ನಿರೂಪಿಸಿದರು, ಎನ್,ಎಸ್,ಎಸ್ ಯೋಜನಾಧಿಕಾರಿಯಾದ ಡಾ.ಪ್ರಕಾಶ್ ಕೆ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಪ್ರೊ.ರಮೇಶ್ ಆಚಾರ್ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ, ಡಾ.ಸುಬ್ರಮಣ್ಯ ಎ. ಐ.ಕ್ಯೂ.ಎ.ಸಿ ಸಂಚಾಲಕರು ಹಾಗೂ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿ ನಾಯಕರಾದ ಕು.ಕೀರ್ತನಾ ಬಿ.ಎಮ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!