spot_img
Wednesday, April 1, 2026
spot_img

ಕುಂದಗನ್ನಡ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ  ಪದವಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ :ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯ ಪ್ರಯುಕ್ತ, ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಕನ್ನಡ ಮತ್ತು ದೈಹಿಕ ಶಿಕ್ಷಣ ವಿಭಾಗ ಹಾಗೂ ಕುಂದಗನ್ನಡ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಹಯೋಗದಲ್ಲಿ ನಡೆದ “ಚೆನ್ನಿಮಣಿ – 2025 – ಎಲ್ಲಾ ಒಂದು ಗಳ್ಗಿ ಬನ್ನಿ” ಎಂಬ ಕುಂದಗನ್ನಡ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.
ರಶಿತಾ, ತೃತೀಯ ಬಿಸಿಎ, ಕುಂದಗನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ, ಅಕ್ಷತಾ, ದ್ವಿತೀಯ ಬಿಸಿಎ, ಕುಂದಗನ್ನಡ ಪದ ಬಳಕೆ ಸ್ಪರ್ಧೆಯಲ್ಲಿ ದ್ವಿತೀಯ, ವೈಭವಿ, ತೃತೀಯ ಬಿಸಿಎ, ಒಂಟಿ ಕಾಲಿನ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಹಾಗು ಲಗೋರಿ ಸ್ಪರ್ಧೆಯಲ್ಲಿ ಪ್ರಥಮ ಬಿಕಾಂನ ವಿದ್ಯಾರ್ಥಿಗಳಾದ ಆಕಾಶ್ ಹೆಚ್ ಯು, ಪ್ರೀತಮ್, ಮಂಜು, ಗೌತಮ್, ಸಚಿನ್, ವೈಭವ್ ಮತ್ತು ಕಾರ್ತಿಕ್ ಇವರು ದ್ವಿತೀಯ ಬಹುಮಾನ ಪಡೆದಿದ್ದಾರೆ.
ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್, ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ್  ಕುಮಾರ್, ಸಾಹಿತ್ಯ ವೇದಿಕೆಯ ಸಂಯೋಜಕರಾದ ಶ್ರೀಮತಿ ಭಾರತಿ ಗಾಣಿಗ, ಕು.ರಾಜೇಶ್ವರಿ ಆರ್ ಶೆಟ್ಟಿ, ಶ್ರೀಮತಿ ರೇವತಿ, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಶುಭಕೋರಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!