spot_img
Saturday, March 14, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನಾ ಸ್ಪರ್ಧೆ

ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಾಗೂ ರೋವರ್ಸ್ & ರೇಂಜರ್ಸ್ ಘಟಕದ ಜಂಟಿ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಆಗಸ್ಟ್ ೨೫ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಹೇಳಿದರು.

ಈ ಸ್ಪರ್ಧೆಯಲ್ಲಿ ಸುಜನ್ ತೃತೀಯ ಬಿ.ಕಾಂ. (ಇ) ಪ್ರಥಮ ಸ್ಥಾನ, ಆಕಾಶ್ ಪೂಜಾರಿ, ತೃತೀಯ ಬಿ.ಕಾಂ. (ಇ) ದ್ವಿತೀಯ ಸ್ಥಾನ, ಸಾಥ್ವಿಕ್ ಕೆ. ಪ್ರಥಮ್ ಬಿ.ಕಾಂ. (ಸಿ) ತೃತೀಯ ಸ್ಥಾನ ಪಡೆದಿದ್ದಾರೆ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, ರೋವರ್ಸ್ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ರೇಂಜರ್ಸ್ ಲೀಡರ್ ಶ್ರೀಮತಿ ಜೋಸ್ಲಿನ್ ಡಿ. ಅಲ್ಮೇಡಾ, ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರು, ಕಾಲೇಜಿನ ಬೋಧಕ-ಬೋಧಕೇತರ ವೃಂದ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!