spot_img
Saturday, March 14, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ಪ್ರಾಕ್ತನ ವಿದ್ಯಾರ್ಥಿಗಳಿಂದ ನಮನ

ಕುಂದಾಪುರ: ವಿದ್ಯಾರ್ಥಿ ಬದುಕಿನಲ್ಲಿ ಪಠ್ಯದ ಜೊತೆಗೆ ಪಠ್ಯಪೂರಕ ಚಟುವಟಿಕೆಗಳು ಅತೀ ಪ್ರಮುಖವಾದದ್ದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಎನ್.ಎಸ್.ಎಸ್.ನಂತಹ ವೇದಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿ ಸಮುದಾಯದಲ್ಲಿ ವ್ಯಕ್ತಿತ್ವದ ವಿಕಸನದ ಜೊತೆಗೆ ಮಾನವೀಯ ಮತ್ತು ಸಂವಿಧಾನಿಕ ಮೌಲ್ಯವನ್ನು ಬೆಳೆಸಲು ರಾಷ್ಟ್ರೀಯ ಸೇವಾ ಯೋಜನೆಯಂತಹ ಪಠ್ಯ ಪೂರಕ ವೇದಿಕೆಗಳು ಅತ್ಯವಶ್ಯಕ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ| ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

ಅವರು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ಘಟಕದ ಪ್ರಾಕ್ತನ ವಿದ್ಯಾರ್ಥಿಗಳು ಆಯೋಜಿಸಿದ ನಲ್ಮೆಯ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇದೇ ಸಂದರ್ಭದಲ್ಲಿ ಡಾಕ್ಟರೇಟ್ ಪದವಿ ಪಡೆದ ಪ್ರಾಂಶುಪಾಲರಿಗೆ ಅಭಿನಂದನೆ ಸಲ್ಲಿಸಲಾಯಿತು. ನಿಕಟಪೂರ್ವ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ| ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿಯವರನ್ನು ಎನ್.ಎಸ್.ಎಸ್. ಪ್ರಾಕ್ತನ ವಿದ್ಯಾರ್ಥಿಗಳ ವತಿಯಿಂದ ಸನ್ಮಾನಿಸಲಾಯಿತು.

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಶ್ರೀ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್, ಕಾಲೇಜಿನ ಬೋಧಕ-ಬೋಧಕೇತರ ವೃಂದ, ಎನ್.ಎಸ್.ಎಸ್. ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಎನ್.ಎಸ್.ಎಸ್. ಪ್ರಾಕ್ತನ ವಿದ್ಯಾರ್ಥಿಗಳಾದ ಶ್ರೀನಾಭ್ ಸ್ವಾಗತಿಸಿದರು. ವಿಘ್ನೇಶ್ವರ್ ಅತಿಥಿಗಳನ್ನು ಪರಿಚಯಿಸಿದರು. ಪವಿತ್ರ ಪೈ ಎನ್.ಎಸ್.ಎಸ್. ಅನುಭವವನ್ನು ಹಂಚಿಕೊಂಡರು. ವಿಘ್ನೇಶ್ ಶೇಟ್ ವಂದಿಸಿದರು. ಶ್ರದ್ಧಾ ಆರ್. ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!