spot_img
Tuesday, March 17, 2026
spot_img

ವಂಡ್ಸೆ: ‘ಯಕ್ಷಹೆಜ್ಜೆ’ಯಲ್ಲಿ ಭಾಗವತರಾದ ಜನ್ಸಾಲೆ ರಾಘವೇಂದ್ರ ಆಚಾರ್ಯ, ಪಟ್ಲ ಸತೀಶ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪುರ: ಆಶೀರ್ವಾದ್ ಫ್ರೆಂಡ್ಸ್ ಅಬ್ಬಿ ಹರವರಿ, ವಂಡ್ಸೆ ಇವರ ಆಯೋಜನೆಯಲ್ಲಿ ಆ.24ರಂದು ವಂಡ್ಸೆ ಉಪಾಧ್ಯಾಯರ ಗದ್ದೆಯಲ್ಲಿ ನಡೆದ ಯಕ್ಷಹೆಜ್ಜೆ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಟಾನ ಹಾಗೂ ತೆಂಕು-ಬಡಗು ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದ ವೇದಿಕೆಯಲ್ಲಿ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಟಾನದ ರಾಘವೇಂದ್ರ ಆಚಾರ್ಯ ಜನ್ಸಾಲೆ ಹಾಗೂ ಯಕ್ಷ ಧ್ರುವ ಪಟ್ಲ ಸತೀಶ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ನಾಗರಾಜ ಮಂಜರು ಮಾರಣಕಟ್ಟೆ, ನಿವೃತ್ತ ಮುಖ್ಯೋಪಾಧ್ಯಾಯರಾದ ರಾಜೀವ ಶೆಟ್ಟಿ ಬಗ್ವಾಡಿ, ನಿವೃತ್ತ ಸರಕಾರಿ ಅಧಿಕಾರಿ ಬಿ.ಎನ್.ಶೆಟ್ಟಿ ಬಗ್ವಾಡಿ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ಮಾಜಿ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಸಂಜೀವ ಪೂಜಾರಿ ವಂಡ್ಸೆ, ಕೈಗಾರಿಕೋದ್ಯಮಿ ರಮೇಶ ದೇವಾಡಿಗ ವಂಡ್ಸೆ, ನೋಟರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಉದಯ ಜಿ.ಪೂಜಾರಿ, ನ್ಯಾಯವಾದಿ ಪ್ರಸನ್ನಕುಮಾರ್ ಶೆಟ್ಟಿ, ಡಾ.ಗೋಪಾಲ ಎನ್.ಜಿ., ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ವೆಂಕಟೇಶ್ ಶೆಟ್ಟಿ ತೆಂಕೊಡಿಗೆ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಗುಂಡು ಪೂಜಾರಿ ಹರವರಿ, ಸ್ಥಳವಂದಿಗರಾದ ಗೋಪಾಲಕೃಷ್ಣ ಉಪಾಧ್ಯಾಯ. ಆಶೀರ್ವಾದ್ ಫ್ರೆಂಡ್ಸ್‌ನ ಮಹೇಶ ಗಾಣಿಗ ಅಬ್ಬಿ, ವಿಜಯ್ ಪೂಜಾರಿ, ಸಂದೀಪ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ದಾಮೋದರ ಶರ್ಮ ಬಾರಕೂರು ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಪಾರಿಜಾತ ಮತ್ತು ಯಾಜ್ಞಸೇನೆ ತೆಂಕು-ಬಡಗು ಕೂಡುವಿಕೆಯಲ್ಲಿ ಅದ್ದೂರಿಯ ಯಕ್ಷಗಾನ ಪ್ರದರ್ಶನ ನಡೆಯಿತು. 2500ಕ್ಕೂ ಹೆಚ್ಚು ಜನ ಪ್ರೇಕ್ಷಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!