spot_img
Wednesday, April 1, 2026
spot_img

ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಗೌರಿ ಹಬ್ಬದ ಆಚರಣೆ

ಕುಂದಾಪುರ: ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು, ಇಲ್ಲಿ ಸೋಣೆ ತಿಂಗಳ ಶುಭ ಮಂಗಳವಾರ, ಭಾದ್ರಪದ ಮಾಸದ ಗೌರಿ ತದಿಗೆಯಂದು ಗೌರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.
ಸಂಸ್ಥೆಯ ಎಲ್ಲಾ ಶಿಕ್ಷಕಿಯರಿಗೆ, ವಿದ್ಯಾರ್ಥಿನಿಯರಿಗೆ ಮತ್ತು ಮಹಿಳಾ ಸಿಬ್ಬಂದಿಗಳಿಗೆ ಬಳೆಗಾರರಿಂದ ಗಾಜಿನ ಬಳೆ ತೊಡಿಸಿ, ಗೌರಿ ಪೂಜೆ ಮಾಡಿ ವಿಶೇಷ ಸಿಹಿ ಊಟದೊಂದಿಗೆ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬಳೆಗಾರರಿಗೆ ಸಂಪ್ರದಾಯ ಪದ್ದತಿಯಂತೆ ಅಕ್ಕಿ, ಕಾಯಿ, ವೀಳ್ಯ, ಬಾಳೆ ಹಣ್ಣು, ಬಳೆಯ ಹಣ ನೀಡಿ ಕೃತಜ್ಞತೆ ತಿಳಿಸುವ ಪರಿಪಾಠ ಮಕ್ಕಳಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಶ್ರೀಮತಿ ಚೈತ್ರ ಯಡಿಯಾಳ ಇವರು ಬಳೆ ತೊಡಿಸುವುದರ ಹಿಂದಿನ ವೈಜ್ಞಾನಿಕ ಮಹತ್ವ ತಿಳಿಸಿ, ಗೌರಿ-ಗಣೇಶ ಹಬ್ಬಕ್ಕೆ ಶುಭಾಶಯ ತಿಳಿಸಿದರು.

ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು, ಕಾರ್ಯದರ್ಶಿಯವರು ಮತ್ತು ಎಲ್ಲಾ ನಿರ್ದೇಶಕರು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಹಬ್ಬದ ಯತಾರ್ಥ ಆಚರಣೆಗೆ ಅಭಿನಂದನೆ ತಿಳಿಸಿ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!