spot_img
Wednesday, April 1, 2026
spot_img

ಬಿ.ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ

ಕುಂದಾಪುರ: ಶಿಕ್ಷಣ ಸಂಸ್ಥೆಯೊಂದಕ್ಕೆ ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಆಡಳಿತ ಮಂಡಳಿಗಳು ಆಧಾರ ಸ್ಥಂಭವಾಗಿದ್ದು ಈ ಮೂರರ ನಡುವೆ ಸೇತುವೆಯಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯನಿರ್ವಹಿಸಬೇಕು. ಈ ಸಮಿತಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದಷ್ಟು ಶೈಕ್ಷಣಿಕ ಸಂಸ್ಥೆ ಸೃಜನಶೀಲವಾಗಿರುತ್ತದೆ ಎಂದು ಬೆಹರಿನ್ ಕಿಂಗ್ಡಮ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಡಾ. ಇಕ್ಬಾಲ್ ಹವಾಲ್ದಾರ್ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ೨೦೨೫-೨೬ನೇ ಶೈಕ್ಷಣಿಕ ಕಾರ್ಯಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ.ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ನೂತನ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ ಪ್ರತಿಜ್ಞಾ ವಿಧಿ ಪೂರೈಸಿದರು. ಎಸ್ಕ್ಯೂ‌ಎಸಿ ಪ್ರತಿನಿಧಿ ನಿರೀಕ್ಷಾ ಶೆಟ್ಟಿ ವಾರ್ಷಿಕ ಚಟುವಟಿಕೆಯ ಪಟ್ಟಿ ವಾಚಿಸಿದರು. ವಿದ್ಯಾರ್ಥಿಗಳಾದ ಮಿಥಿಲೇಶ್ ಸ್ವಾಗತಿಸಿ, ಐಶ್ವರ್ಯ ಅತಿಥಿಗಳನ್ನು ಪರಿಚಯಿಸಿದರು. ಅನುಶ್ರೀ ಕೆ. ಶೆಟ್ಟಿ ವಂದಿಸಿ, ಶ್ರೀರಕ್ಷಾ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!