spot_img
Wednesday, April 1, 2026
spot_img

ಪ್ರಥಮ ಚಿಕಿತ್ಸೆ ಬಗೆಗಿನ ಜಾಗೃತಿ ನಮ್ಮೆಲ್ಲರ ಕರ್ತವ್ಯ: ಡಾ. ಸೋನಿ

ಕುಂದಾಪುರ :ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಜಿನೇವಾ ಒಪ್ಪಂದದ ಜಾಗೃತಿ ಮತ್ತು ಪ್ರಥಮ ಚಿಕಿತ್ಸಾ ತರಬೇತಿ’ ಕಾರ್ಯಕ್ರಮ ಜರುಗಿತು .
ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಯಕ್ರಮದ ಮುಖ್ಯ ಅತಿಥಿ ಭಾರತೀಯ ರೆಡ್ ಕ್ರಾಸ್ ಘಟಕ, ಕುಂದಾಪುರ  ಇದರ ಮುಖ್ಯಸ್ಥರಾದ  ಜಯಕರ ಶೆಟ್ಟಿಯವರು ಮಾತನಾಡುತ್ತ ಜಿನೇವಾ ಒಪ್ಪಂದದ ಮಹತ್ವ, ರೆಡ್ ಕ್ರಾಸ್ ಸಂಸ್ಥೆಯ ಚರಿತ್ರೆ ಅದು ವಿಶ್ವದಾದ್ಯಂತ ವ್ಯಾಪಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ನಿರ್ವಹಿಸಿದ ಕಾರ್ಯಗಳು, ವ್ಯಾಪ್ತಿ ಮತ್ತು ಮಹತ್ವವನ್ನು ತಿಳಿಸಿದರು. ಅಲ್ಲದೆ ರೆಡ್ ಕ್ರಾಸ್ ಸಂಸ್ಥೆಯ ಮುಖ್ಯ ಧೋರಣೆ ಯನ್ನು ವಿವರಿಸುತ್ತ ಯುದ್ದ, ಪ್ರವಾಹ ಹಾಗು ಕಷ್ಟದ ಸಂದರ್ಭದಲ್ಲಿ ಸಂಕಷ್ಟಕ್ಕೀಡಾದ ಅಸಹಾಯಕರಿಗೆ ಸಹಾಯವನ್ನು ಮಾಡುವುದು. ಮಾನವೀಯತೆಯನ್ನು ತೋರಿ ಅವರಿಗೆ ಶುಶ್ರೂಷೆಯನ್ನು ಮಾಡುವುದು. ದೇಶ ಧರ್ಮವನ್ನು ಮೀರಿ ಮನುಷತ್ವಕ್ಕೆ ಹಾಗೂ ಮಾನವೀಯತೆಗೆ ಮೊದಲ ಆದ್ಯತೆಯನ್ನು ನೀಡುವುದು ಎಂದು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ  ಇಶಾನಿ ಮೆಡಿಕಲ್ ಸೆಂಟರ್ ಇದರ ವೈದ್ಯಾಧಿಕಾರಿಯಾದ ಡಾ. ಸೋನಿ ಪ್ರಥಮ ಚಿಕಿತ್ಸೆಯ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಆರೋಗ್ಯಕ್ಕೆ ಸಂಬಂಧಪಟ್ಟ  ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೇಗೆ ಪ್ರಥಮ ಚಿಕಿತ್ಸೆಯನ್ನು ನೀಡಬಹುದು ಎನ್ನುವುದನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ ಮತ್ತು ಆರೋಗ್ಯಕ್ಕೆ ಸಂಬಂಧಪಟ್ಟ ಉಪಯುಕ್ತ ಮಾಹಿತಿಯನ್ನ ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರತಿಭಾ ಎಂ ಪಟೇಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇದರ ಖಜಾಂಜಿಯಾದ  ಶಿವರಾಮ್ ಶೆಟ್ಟಿ,  ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರು  ಮತ್ತು ಉಪ ಪ್ರಾಂಶುಪಾಲರಾದ  ಜಯಶೀಲ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಂಚನ  ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!