spot_img
Wednesday, April 1, 2026
spot_img

ಕೃಷಿ ಪಂಡಿತ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ವಿನೂತನ / ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಕೃಷಿ ಪಂಡಿತ ಪ್ರಶಸ್ತಿಗೆ ಕೆ-ಕಿಸಾನ್ ಪೋರ್ಟಲ್‌ ನಡಿ ಆರ್.ಎಸ್.ಕೆ ಲಾಗಿನ್ ಅಥವಾ ಸಿಟಿಜನ್ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸ್ವತಃ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ ಯನ್ನು ಬಳಸಿಕೊಂಡು ಆನ್‌ಲೈನ್ ಮೂಲಕ ಆಗಸ್ಟ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!