spot_img
Thursday, April 2, 2026
spot_img

ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ: ನೂತನ ಅಧ್ಯಕ್ಷರಾಗಿ ಸತೀಶ ಕಿಣಿ, ಉಪಾಧ್ಯಕ್ಷರಾಗಿ ಸಂಪಿಗೇಡಿ ಸಂಜೀವ ಶೆಟ್ಟಿ ಅವಿರೋಧ ಆಯ್ಕೆ

ಬ್ರಹ್ಮಾವರ: ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ನಿಯಮಿತ ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸತೀಶ ಕಿಣಿ ಬೆಳ್ವೆ ಆಯ್ಕೆ ಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಪಿಗೇಡಿ ಸಂಜೀವ ಶೆಟ್ಟಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುಕ್ರವಾರ ನಡೆಯಿತು. ಸಹಕಾರಿ ಸಂಘಗಳ ಉಪ ನಿಬಂಧಕ ಕಚೇರಿ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಿ. ಎಮ್. ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಭುಜಂಗ ಶೆಟ್ಟಿ ಬ್ರಹ್ಮಾವರ, ಕೆದೂರು,ಸದಾನಂದ ಶೆಟ್ಟಿ, ಹೆಚ್. ಹರಿಪ್ರಸಾದ್ ಶೆಟ್ಟಿ, ಮಂಜುನಾಥ್ ಗಿಳಿಯಾರು ,ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ರಂಗನಾಯಕ, ಶಿವರಾಮ್ ಹಾಲಾಡಿ, ಭೋಜ ಕುಲಾಲ್ ಬೆಳಂಜೆ, ಚೈತ್ರ ಅಡಪ, ಗಿರಿಜಾ ಪೂಜಾರ್ತಿ ಅಮಾಸೆಬೈಲು ಉಪಸ್ಥಿತರಿದ್ದರು.

ಇತ್ತೀಚೆಗೆ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ರೈತರ ಸಂಘದ ಬೆಂಬಲಿತ ಗುಂಪು ಪೂರ್ಣ ಬಹುಮತ ಗಳಿಸಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!