spot_img
Monday, February 16, 2026
spot_img

ಸರಕಾರಿ ಶಾಲೆಗಳ ಹಿನ್ನೆಡೆಗೆ ಸರಕಾರದ ನಿರಾಸಕ್ತಿಯೇ ಕಾರಣ-ಅಬ್ದುಲ್ ಸಲಾಂ ಚಿತ್ತೂರು

ಕುಂದಾಪುರ: ಪ್ರಸ್ತುತ ಸರಕಾರಿ ಶಾಲೆಗಳು ಹಿನ್ನಡೆ ಅನುಭವಿಸಲು ಸರಕಾರದ ಕೆಲವೊಂದು ನಿರ್ಧಾರಗಳೇ ಕಾರಣ. ಸರಕಾರಿ ಶಾಲೆಗಳಿಗೆ ಸರಿಯಾದ ಮೂಲ ಸೌಕರ್ಯ ಒದಗಿಸದೆ ಇರುವುದು, ಅವಶ್ಯಕ ಶಿಕ್ಷಕರ ಕೊರತೆ, ಇವತ್ತಿನ ಸ್ಪರ್ಧಾತ್ಮಕ ಕಾಲಘಟ್ಟಕ್ಕೆ ಸೂಕ್ತವಾದ ಸೌಲಭ್ಯವನ್ನು ಒದಗಿಸಿಕೊಡುವಲ್ಲಿ ಆಳುವ ಸರಕಾರಗಳ ನಿರಾಸಕ್ತಿಯೇ ಕಾರಣ. ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರ ಪ್ರಾಮಾಣಿಕ ಕಾರ್ಯಕ್ರಮಗಳನ್ನು ಅನುಷ್ಠಾನಿಸಬೇಕಾಗಿದೆ ಎಂದು ಎಸ್.ಡಿ.ಎಮ್.ಸಿ ಸಮನ್ವಯ ಕೇಂದ್ರ ವೇದಿಕೆ (ರಿ) ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಹೇಳಿದರು.

ಕುಂದಾಪುರದ ಶಿವಪ್ರಸಾದ್ ಗ್ರ್ಯಾಂಡ್ ಹೋಟೆಲ್ ಸಭಾಂಗಣದಲ್ಲಿ ಆ.29ರಂದು ನಡೆದ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕ, ಶಿವಪ್ರಸಾದ್ ಗ್ರಾಂಡ್ ಕುಂದಾಪುರ ಇವರ ಸಹೋಗದೊಂದಿಗೆ ಮಗು ಮತ್ತು ಕಾನೂನು ಕೇಂದ್ರ, ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಬೆಂಗಳೂರು ಸುಗಮಕಾರರಾಗಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆಸಿದ್ದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಶುಕ್ರವಾರ ಇಲ್ಲಿನ ಬಹುಮಾನ ವಿತರಿಸಿ ಮಾತನಾಡಿದರು.

ಸರಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವ ಜೊತೆಗೆ ಎಸ್‌ಡಿ‌ಎಂಸಿ ಸಬಲೀಕರಣ, ಶಿಕ್ಷಕರ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ರಾಜಕೀಯ, ಜಾತಿ-ಧರ್ಮ ರಹಿತವಾಗಿ ಹಗಲಿರುಳು ಕೆಲಸ ಮಾಡುತ್ತಿದೆ. ಸರಕಾರಿ ಶಾಲೆಗಳಲ್ಲಿ ಅಕ್ಷರ ಜ್ಞಾನ ನೀಡಿದ ಸರಕಾರಿ ಶಾಲೆಗಳ ಅಭ್ಯುದಯಕ್ಕೆ ಅಲ್ಲಿನ ಹಳೆ ವಿದ್ಯಾರ್ಥಿಗಳ ಒಗ್ಗೂಡುವಿಕೆಯೂ ಅಗತ್ಯವಾಗಿದ್ದು ಕಾನೂನುಬದ್ಧವಾಗಿ ಹಳೆ ವಿದ್ಯಾರ್ಥಿ ಸಂಘ ರಚಿಸಿ ಅದಕ್ಕೆ ಆ ಶಾಲೆಯ ಮುಖ್ಯೋಪಾಧ್ಯಾಯರು ಕಾರ್ಯದರ್ಶಿಯಾಗಿ ನೇಮಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ. ಒಟ್ಟಾರೆಯಾಗಿ ಸರಕಾರಿ ಶಾಲೆಗಳು ಉಳಿಯಬೇಕು, ಬೆಳೆಯಬೇಕು ಎಂದರು.

ಕೋಟೇಶ್ವರ ಗೀತಾ ಹೆಚ್.ಎಸ್.ಎನ್ ಫೌಂಡೇಶನ್‌ನ ಅಧ್ಯಕ್ಷ, ಎಸ್.ಡಿ.ಎಮ್.ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕದ ಮಹಾಪೋಷಕರಾದ ಶಂಕರ್ ಐತಾಳ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಗಳನ್ನು ಇವತ್ತಿನ ಕಾಲಘಟ್ಟಕ್ಕೆ ಅನುಗುಣವಾಗಿ ಸೌಕರ್ಯ, ಸೌಲಭ್ಯವನ್ನು ಒದಗಿಸಿ ಅಭಿವೃದ್ಧಿ ಪಡಿಸಿದರೆ ಖಂಡಿತಾ ಮಕ್ಕಳ ಸಂಖ್ಯೆ ಹೆಚ್ಚಳವಾಗುತ್ತದೆ. ಅದಕ್ಕೆ ಅಮಾಸೆಬೈಲು ಸರಕಾರಿ ಶಾಲೆಯೇ ಒಂದು ಉದಾಹರಣೆ ಎಂದರು.

ಎಸ್.ಡಿ.ಎಮ್.ಸಿ ಸಮನ್ವಯ ಕೇಂದ್ರ ವೇದಿಕೆ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಎಸ್.ವಿ. ನಾಗರಾಜ ಮಾತನಾಡಿ, ಸರಕಾರಿ ಶಾಲೆಗಳ ಅಭಿವೃದ್ಧಿ, ಎಸ್.ಡಿ.ಎಂ.ಸಿ ಹಕ್ಕು, ಕರ್ತವ್ಯಗಳನ್ನು ಜಾಗೃತಿಗೊಳಿಸಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಸಿಗುವಲ್ಲಿ ಸಮನ್ವಯ ವೇದಿಕೆ ೨೦೧೩ ರಲ್ಲಿ ಆರಂಭಗೊಂಡು, ಸರಕಾರಿ ಶಾಲೆಗಳ ಉಳಿವಿನ ದೃಷ್ಟಿಯಿಂದ ಕೆಲಸ ನಿರ್ವಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿಜೇತ ಮಕ್ಕಳಿಗೆ ಪ್ರಮಾಣಪತ್ರ ಹಾಗೂ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ಕುಂದಾಪುರ ಪುರಸಭಾ ಸದಸ್ಯ ಅಬು ಮೊಹಮ್ಮದ್ ಮುಜಾವರ್, ಎಸ್.ಡಿ.ಎಮ್.ಸಿ ಸಮನ್ವಯ ಕೇಂದ್ರ ವೇದಿಕೆ ಕರ್ನಾಟಕ ರಾಜ್ಯ ಸಂಚಾಲಕ ಮೊಯಿದಿನ್ ಕುಟ್ಟಿ, ಸಂಘಟನೆಯ ಪುರಸಭಾ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್ ಉಪಸ್ಥಿತರಿದ್ದರು.

ಎಸ್.ಡಿ.ಎಮ್.ಸಿ ಸಮನ್ವಯ ಕೇಂದ್ರ ವೇದಿಕೆ ಜಿಲ್ಲಾ ಕಾರ್ಯದರ್ಶಿ ದೀಪಾ ಜಪ್ತಿ ನಿರೂಪಿಸಿ, ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ಪ್ರಮೋದಾ ಕುಶಲ್ ಶೆಟ್ಟಿ ಸ್ವಾಗತಿಸಿ, ಪುರಸಭಾ ಘಟಕದ ಕಾರ್ಯದರ್ಶಿ ವರದಾ ಸುಧಾಕರ್ ಆಚಾರ್ಯ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!