spot_img
Thursday, April 2, 2026
spot_img

ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸ್ಪಂದನೆ

ಮಂಗಳೂರು : ಬಿಡುವಿಲ್ಲದೆ ನಿರಂತರ ಸುರಿದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ತೋಟಗಳಿಗೆ ಕೊಳೆ ರೋಗ ಹರಡಿದೆ. ಇದರಿಂದ ಶೇಕಡಾ 50 ಕ್ಕಿಂತ ಹೆಚ್ಚು ಬೆಳೆ ನಾಶವಾಗಿದ್ದು ಕೃಷಿಕರ ಆದಾಯಕ್ಕೆ ಬರೆ ಬಿದ್ದಂತಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಮೂಲತ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕತೆಯು ಕೃಷಿ ಆಧಾರಿತವಾಗಿದ್ದು ಇಲ್ಲಿನ ಕೃಷಿಕರು ಹೆಚ್ಚಾಗಿ ಅಡಿಕೆ ಬೆಳೆಯನ್ನು ತಮ್ಮ ಜೀವನಾಧಾರವಾಗಿಸಿಕೊಂಡಿದ್ದಾರೆ. ಅಡಿಕೆ ಬೆಳೆಯ ಬೆಲೆ ಏರಿಳಿತ ಹಾಗೂ ಅಡಿಕೆ ಉತ್ಪನ್ನದ ಪ್ರಮಾಣದಲ್ಲಿ ಏರಿಳಿತವು ಇಲ್ಲಿನ ಜನ ಜೀವನವನ್ನು ತೀವ್ರವಾಗಿ ಸಂಕಷ್ಟಕ್ಕೀಡು ಮಾಡುತ್ತದೆ.

ಅಡಿಕೆಗೆ ಕೊಳೆ ರೋಗದ ಜೊತೆಗೆ ಹಳದಿ ರೋಗದ ಬಾದೆಯು ಹೆಚ್ಚು ಕಂಡು ಬರುತ್ತಿರುವ ಕಾರಣ ಅಡಿಕೆ ಬೆಳೆಗಾರರನ್ನು ಕಂಗೆಡಿಸಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬ್ಯಾಂಕ್ ಯಾವಾಗಲೂ ರೈತರ ಪರವಾಗಿದ್ದು ಅಡಿಕೆ ಕೊಳೆ ರೋಗದ ಬಗ್ಗೆ ಸರಕಾರದ ಗಮನಕ್ಕೆ ತರಲಾಗುವುದೆಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!