Sunday, September 8, 2024

ತ್ರಾಸಿ: ಜ್ಞಾನ ತಾಣ ಕಾರ್ಯಕ್ರಮ ಉದ್ಘಾಟನೆ| ಕೊರೋನೊತ್ತರ ಕನ್ನಡ ಮಾಧ್ಯಮ ಶಾಲೆಗಳ ಏರುಗತಿ-ಶೋಭಾ ಪುತ್ರನ್

 


ಬೈಂದೂರು: ಕೋವಿಡ್ ಸಮಸ್ಯೆಯಿಂದ ಶಾಲೆಗಳು ಮುಚ್ಚಿರುವ ಈ ಸಂದರ್ಭವನ್ನು ಉಪಯೋಗಿಸಿಕೊಂಡು ಗ್ರಾಮೀಣ ಮಕ್ಕಳಲ್ಲಿ ಅಂತರ್ಜಾಲ ಶಿಕ್ಷಣದ ಮಹತ್ವವನ್ನು ತಿಳಿಸಲು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ, ಭವಿಷ್ಯದಲ್ಲಿ ಅವರ ಕಲಿಕೆಯನ್ನು ಗಮನದಲ್ಲಿಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾಡಿರುವ ಜ್ಞಾನತಾಣ ಕಾರ್ಯಕ್ರಮ ಗ್ರಾಮೀಣ ಮಕ್ಕಳ ವಿದ್ಯಾಬ್ಯಾಸಕ್ಕೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದ್ಭಳಕೆ ಮಾಡಿಕೊಳ್ಳಬೇಕು. ಸರಕಾರ ಕೂಡ ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಇರುವ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ನೀಡುವ ಆಶಯ ವ್ಯಕ್ತಪಡಿಸಿರುವುದು ಶ್ಲಾಘನೀಯ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಹೇಳಿದರು.

ತ್ರಾಸಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಕಛೇರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನತಾಣ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿತ್ತು. ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕುಸಿದಿತ್ತು. ಆದರೆ ಕರೋನಾ ಬಂದ ಬಳಿಕ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯಲ್ಲಿ ಏರಿಕೆ ಕಂಡಿದೆ. ಕರೋನಾ ಜನರಿಗೆ ಜೀವನ ಕಲಿಸುವ ಅಸ್ತ್ರವಾಗಿ ಪರಿಣಮಿಸಿದ್ದು, ಎಲ್ಲರೂ ಕನ್ನಡ ಮಾಧ್ಯಮಕ್ಕೆ ಪ್ರಾಶಸ್ತ್ಯ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ., ಪ್ರಥಮ ವರ್ಷದಲ್ಲಿ ಜ್ಞಾನತಾಣ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಸೌಲಭ್ಯವು ಲಭ್ಯವಾಗಲಿದ್ದು, 81 ಕೋಟಿ ರೂ. ಇದಕ್ಕಾಗಿ ವಿನಿಯೋಗಿಸಲಾಗುತ್ತಿದೆ. ಬೈಂದೂರು ತಾಲೂಕಿನಲ್ಲಿ 5-10ನೇ ತರಗತಿಯ 100 ವಿದ್ಯಾರ್ಥಿಗಳಿಗೆ ಟ್ಯಾಬ್ ಮತ್ತು 50 ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಬಂಧು ಮತ್ತು ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ಸಾಂಕೇತಿಕವಾಗಿ ಟ್ಯಾಬ್ ಮತ್ತು ಲ್ಯಾಪ್ ಟಾಪ್‌ಗಳನ್ನು ವಿತರಿಸಲಾಯಿತು. ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ. ಗುಜ್ಜಾಡಿ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಸುಧಾಕರ ಆಚಾರ್ಯ, ಬಿ.ರಾಘವೇಂದ್ರ ಪೈ, ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ನಾಗರಾಜ ಖಾರ್ವಿ ಉಪಸ್ಥಿತರಿದ್ದರು.

ತ್ರಾಸಿ ವಲಯ ಮೇಲ್ವಿಚಾರಕ ವೆಂಕಟೇಶ ಸ್ವಾಗತಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಂತರಿಕ ಲೆಕ್ಕಪರಿಶೋಧಕ ರಾಘವೇಂದ್ರ ಕಾರ್ಯಕ್ರಮ ನಿರ್ವಹಿಸಿದರು. ಜ್ಞಾನವಿಕಾಸ ಸಮ್ವಯಾಧಿಕಾರಿ ಗೀತಾ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!