spot_img
Wednesday, March 25, 2026
spot_img

ಹುಬ್ಬಳ್ಳಿ-ಧಾರವಾಡ ಬಂಟರ ಸಂಘ : ಬಂಟ್ಸ್ ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್‌ಗೆ ಚಾಲನೆ

 


ಹುಬ್ಬಳ್ಳಿ-ಧಾರವಾಡ ಬಂಟರ ಸಂಘ ಆಯೋಜಿಸಿದ ಹುಬ್ಬಳ್ಳಿ-ಧಾರವಾಡ ಬಂಟ್ಸ್ ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್- 2020 ಉದ್ಘಾಟನೆ ಶನಿವಾರ ನಡೆಯಿತು. ನಗರದ ಕುಸುಗಲ್ ರಸ್ತೆಯ ನವೀನ್ ಪಾರ್ಕ್‌ನ ಅತ್ರೇಯ ಸ್ಪೋರ್ಟ್ಸ್ ಅಕಾಡೆಮಿ ಬ್ಯಾಡ್ಮಿಂಟನ್ ಕೋಚಿಂಗ್ ಸೆಂಟರ್‌ನಲ್ಲಿ ಬ್ಯಾಡ್ಮಿಂಡನ್ ಲೀಗ್‌ಗೆ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಡ್ಮಿಂಟನ್ ಪ್ರತಿಭೆಗಳು ಹೊರಹೊಮ್ಮುವುದು ಅವಶ್ಯಕವಾಗಿದೆ. ಬ್ಯಾಡ್ಮಿಂಟನ್ ಕ್ರೀಡೆಗೆ ಉತ್ತಮ ಪ್ರೋತ್ಸಾಹ ದೊರೆಯುತ್ತಿದ್ದು, ಆಸಕ್ತ ಯುವ ಪಟುಗಳು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಉತ್ತರ ಕರ್ನಾಟಕ ಭಾಗದ ಯುವ ಕ್ರಿಡಾಪಟುಗಳು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದರು.

ಹುಬ್ಬಳ್ಳಿ – ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಭಾಸಚಂದ್ರ ಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ, ಉಪಾಧ್ಯಕ್ಷರಾದ ವೀರೇಂದ್ರ ಶೆಟ್ಟಿ, ಖಜಾಂಚಿ ಹರ್ಷ ಶೆಟ್ಟಿ, ಮಾಜಿ ಅಧ್ಯಕ್ಷರಾದ ಅಶೋಕಕುಮಾರ ಶೆಟ್ಟಿ, ದಿನೇಶ ಶೆಟ್ಟಿ, ಕ್ರೀಡಾ ಸಮಿತಿ ಸಂಚಾಲಕರಾದ ಸುಧೀರ ಶೆಟ್ಟಿ, ಪದಾಧಿಕಾರಿಗಳಾದ ಪ್ರದೀಪ ಪಕ್ಕಲ್, ರಾಜೇಂದ್ರ ಶೆಟ್ಟಿ, ಪಾಲಿಕೆ ಮಾಜಿ ಸದಸ್ಯ ವಿಜಯಾನಂದ ಶೆಟ್ಟಿ ಹಾಗೂ ಇತರ ಇತರ ಸದಸ್ಯರು ಉಪಸ್ಥಿತರಿದ್ದರು.

2 ದಿನಗಳ ಬ್ಯಾಡ್ಮಿಂಟನ್ ಲೀಗ್‌ನಲ್ಲಿ ವಿಶ್ವನಾಥ ಶೆಟ್ಟಿ ಮಾಲಿಕತ್ವದ ಮಂಜೊಟ್ಟಿ, ವಿಜಯಾನಂದ ಶೆಟ್ಟಿ ಮಾಲಿಕತ್ವದ ಒಡ್ಡೋಲಗ, ಪ್ರದೀಪ ಪಕ್ಕಲ್ ಮಾಲಿಕತ್ವದ ಕಂಬಳ, ರಾಜೇಂದ್ರ ಶೆಟ್ಟಿ ಮಾಲಿಕತ್ವದ ರಂಗಸ್ಥಳ ಹಾಗೂ ಸುಭಾಸಚಂದ್ರ ಶೆಟ್ಟಿ ಮಾಲಿಕತ್ವದ ಬಯಲಾಟ 5 ತಂಡಗಳು ಭಾಗವಹಿಸಿದ್ದವು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!