spot_img
Friday, March 13, 2026
spot_img

ಗಂಗೊಳ್ಳಿಯಲ್ಲಿ ಗಣೇಶ ವಿಸರ್ಜನ ಮೆರವಣಿಗೆ : ಮದ್ಯ ಮಾರಾಟ ನಿಷೇಧ

ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಗ್ರಾಮದ ವಿಜಯ ವಿಠಲ ದೇವಸ್ಥಾನ ಮತ್ತು ಕಲೆಕಾರ್ ಮಠ ಗಣೇಶ ವಿಸರ್ಜನೆ ಮೆರವಣಿಗೆಯು ಆಗಸ್ಟ್ 31 ರಂದು ಸಂಜೆ 4 ಗಂಟೆಗೆ ಹೊರಡಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಗ್ರಾಮದ ಬಂದರು, ಮ್ಯಾಗನೀಸ್ ರಸ್ತೆ, ಮೇಲ್ ಗಂಗೊಳ್ಳಿ, ಬಾವಿಕಟ್ಟೆ ರಾಮಮಂದಿರ ವಠಾರದ ಸುತ್ತಮುತ್ತಲಿನ 8 ಕಿ.ಮೀ ಪರಿಸರದಲ್ಲಿ ಹಾಗೂ ಗುಜ್ಜಾಡಿ ಗ್ರಾಮದ ನಾಯಕವಾಡಿ, ಗುಜ್ಜಾಡಿ ಬೆಣ್ಣೇರಿ, ಹೊಸಾಡು ಗ್ರಾಮದ ಮುಳ್ಳಿಕಟ್ಟೆ, ಅರಾಟೆ, ದಿವಳಿ, ಗಾಣದ ಮಕ್ಕಿ, ತ್ರಾಸಿ ಗ್ರಾಮದ ತ್ರಾಸಿ, ಹೊಸಪೇಟೆ, ಆನಗೋಡು, ಮೊವಾಡಿ ಸುತ್ತಮುತ್ತಲಿನ 8 ಕಿ.ಮೀ ಪರಿಸರದಲ್ಲಿ ವ್ಯಾಪ್ತಿಯಲ್ಲಿ ಆ.31 ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‍ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!