spot_img
Wednesday, April 1, 2026
spot_img

ಹೆಮ್ಮಾಡಿ ಜನತಾ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಕುಸ್ತಿ ಪಂದ್ಯಾಟ ಉದ್ಘಾಟನೆ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಕ್ರೀಡೆಯಿಂದ ಪ್ರಾಮಾಣಿಕತೆ, ಶಿಸ್ತು, ಸಮನ್ವಯತೆ ಲಭಿಸುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲೂ ಕೂಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ. ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಕ್ರೀಡೆಯಿಂದ ಸಾಧ್ಯವಿದೆ. ಕ್ರೀಡಾಸ್ಪೂರ್ತಿಯನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಪ ನಿರ್ದೇಶಕ ಮಾರುತಿ ಹೇಳಿದರು.

ಅವರು ಆ.೩೦ರಂದು ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು, ಶಾಲಾ ಶಿಕ್ಷಣ ಇಲಾಖೆ ಪ.ಪೂ. ವಿಭಾಗದ ಆಶ್ರಯದಲ್ಲಿ ಜನತಾ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕುಸ್ತಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು, ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ದೇಹ ಸದೃಢವಾಗಿದ್ದರೆ ಮನಸ್ಸು ಕೂಡಾ ಸದೃಢವಾಗಿರುತ್ತದೆ. ಎಲ್ಲಾ ಕಾಲೇಜುಗಳಲ್ಲಿ ಕ್ರೀಡೆಗೆ ಮಹತ್ವ ನೀಡುವ ಕೆಲಸ ಮಾಡಲಾಗುತ್ತಿದೆ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಮನಸ್ಥಿತಿಯಲ್ಲಿ ಗೊಂದಲ ಇರಬಾರದು. ಕ್ರೀಡೆಯಿಂದ ಸಾಕಷ್ಟು ಪ್ರಯೋಜನಗಳಿವೆ. ದೈಹಿಕ, ಮಾನಸಿಕವಾಗಿ ವಿಕಾಸನ ಮಾತ್ರವಲ್ಲದೆ ಕ್ರೀಡಾಕೂಟದಡಿ ಉದ್ಯೋಗವಕಾಶಗಳು ಸಿಗುತ್ತದೆ. ಕ್ರೀಡಾ ಮೀಸಲಾತಿ ರಾಷ್ಟ್ರಮಟ್ಟದ ತನಕ ವಿದ್ಯಾರ್ಥಿಗೆ ಲಭಿಸುತ್ತದೆ ಎಂದು ಹೇಳಿದ ಅವರು, ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಅನೇಕ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ್ದಾರೆ. ಕಳೆದ ಬಾರಿ ೪೧ ವಿದ್ಯಾರ್ಥಿಗಳು ರಾಜ್ಯ ಮಟ್ಟ ೫ ವಿದ್ಯಾರ್ಥಿಗಳು ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ್ದಾರೆ ಎಂದರು.

ರಾಷ್ಟ್ರೀಯ ಈಜುಪಟು ನಾಗರಾಜ್ ಖಾರ್ವಿ ಕಂಚಗೋಡು ಮಾತನಾಡಿ, ಶಿಕ್ಷಣದ ಬೆಳಕು ಹಂಚಿದಷ್ಟು ವ್ಯಾಪಿಸುತ್ತದೆ. ಆ ಪುಣ್ಯದ ಕೆಲಸವನ್ನು ಈ ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ. ಕ್ರೀಡೆಯಲ್ಲಿ ಸೋಲುಗೆಲುವು ಮುಖ್ಯವಲ್ಲ, ಗೆದ್ದರೆ ಖುಷಿ ಪಡಿ, ಸೋತರೆ ಕುಗ್ಗಬೇಡಿ ಎಂದರು.

ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಜೀವನ ಕುಮಾರ್ ಶೆಟ್ಟಿ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಹೊಸಮಠ, ತಾಲೂಕು ಕ್ರೀಡಾ ಸಂಯೋಜಕ ರಾಮ ಶೆಟ್ಟಿ, ಜನತಾ ಅನುದಾನಿತ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ, ಕಾಲೇಜಿನ ಉಪ ಪ್ರಾಂಶುಶಾಲ ರಮೇಶ್ ಪೂಜಾರಿ ಉಪಸ್ಥಿತರಿದ್ದರು.

ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ನಾಯ್ಕ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!