spot_img
Wednesday, April 1, 2026
spot_img

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ ‘ಟೆಕ್ ಮಂಥನ್ 5.0’ ಸಂಪನ್ನ

ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಆಗಸ್ಟ್ ೩೦ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆದ ಅಂತರ್ ತರಗತಿ ಐಟಿ ಫೆಸ್ಟ್ “ಟೆಕ್ ಮಂಥನ್ 5.0” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರನ್ನು ಪುರಸ್ಕರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೈಂದೂರು ಪದವಿ ಪೂರ್ವ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕರಾದ ಪ್ರಸನ್ನ ಮಯ್ಯ ಅವರು ಮಾತನಾಡಿ, ಯಶಸ್ಸು ಎಂಬುದು ಅಂತಿಮ ನಿಲ್ದಾಣವಲ್ಲ, ಯಶಸ್ಸು ನಿರಂತರ ಪ್ರಯಾಣವಾಗಿದೆ. ನಾವು ಈ ಪ್ರಯಾಣದುದ್ದಕ್ಕೂ ಹೊಸ ವಿಷಯಗಳನ್ನು ತಿಳಿಯುತ್ತಾ ಹೋದಾಗ ಮಾತ್ರ ನಮ್ಮ ಜೀವನದಲ್ಲಿ ಬದಲಾವಣೆ ತರಲು ಸಾಧ್ಯ ಎಂದರು.

ಕಾರ್ಯಕ್ರಮದ ಇನ್ನೋರ್ವ ಅತಿಥಿ ನಮ್ಮ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ, ಯುನಿಫೈಸಿ‌ಎಕ್ಸ್ ಕಂಪೆನಿಯ ವೆಬ್ ಹೊಸ್ಟ್ ಇಂಜಿನೀಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಕು. ಕೀರ್ತನಾ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪ್ರತಿಭೆಗಳ ಅನಾವರಣದ ಜೊತೆಗೆ ಪ್ರಾಯೋಗಿಕ ಜ್ಞಾನವನ್ನು ನೀಡುವುದರಿಂದ ಭವಿಷ್ಯದಲ್ಲಿ ಆತ್ಮವಿಶ್ವಾಸದಿಂದ ಹೆಜ್ಜೆ ಇಡುವಲ್ಲಿ ಕೊಡುಗೆ ನೀಡುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿಯವರು ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ನೀಡಿ ಅಭಿನಂದಿಸಿದರು.

ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್, ವಿದ್ಯಾರ್ಥಿ ಪ್ರತಿನಿಧಿಗಳಾದ ತೃತೀಯ ವರ್ಷದ ಬಿ.ಸಿ.ಎ. ಪದವಿಯ ಅಭಿಷೇಕ್ ಶೆಟ್ಟಿ, ನಿರೀಕ್ಷಾ, ಎರೋಲ್, ವೈಷ್ಣವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ವರ್ಷದ ಬಿ.ಸಿ.ಎ. ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಟೆಕ್ ಮಂಥನ್ ೫.೦ ಕಾರ್ಯಕ್ರಮದಲ್ಲಿ ದ್ವಿತೀಯ ಬಿಸಿ‌ಎ (ಎ) ವಿಭಾಗವು ಸಮಗ್ರ ಪ್ರಶಸಿ, ದ್ವಿತೀಯ ಬಿಸಿ‌ಎ (ಬಿ) ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

ಗಣಕಶಾಸ್ತ್ರ ಪ್ರಾಧ್ಯಾಪಕಿ ರಶ್ಮಿ ಗಾವಡಿ ಅತಿಥಿಗಳನ್ನು ಪರಿಚಯಿಸಿ, ಸಂಸ್ಥೆಯ ಡೀನ್ ಅಕಾಡೆಮಿಕ್ಸ್ ಗಿರಿರಾಜ್ ಭಟ್ ವಿಜೇತರ ಪಟ್ಟಿಯನ್ನು ವಾಚಿಸಿದರು. ಕಾರ್ಯಕ್ರಮದ ಸಂಯೋಜಕರು, ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಜಯಲಕ್ಷ್ಮಿ ಕೆ. ಸ್ವಾಗತಿಸಿ, ಶ್ರೀಕಾಂತ್ ಕಣಿಯಾರ್ ವಂದಿಸಿದರು. ಪ್ರಣಮ್ ಆರ್. ಕಾರ್ಯಕ್ರಮವನ್ನು ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!