spot_img
Thursday, April 2, 2026
spot_img

ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ

ಉಡುಪಿ: ರೋಟರಿ ಕ್ಲಬ್ ಮಣಿಪಾಲ ಹಾಗೂ ಉಡುಪಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಇಂಟರಾಕ್ಟ್ ಕ್ಲಬ್ ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಅರಿವು ಕಾರ್ಯಕ್ರಮವು ಕಾಲೇಜಿನ ಸಭಾಭವನದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ರಾಜಲಕ್ಷ್ಮಿಯವರು ಹದಿಹರೆಯದ ವಿದ್ಯಾರ್ಥಿಗಳ ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಸಾಮಾಜಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಜಗದೀಶ ಕುಮಾರ ಅವರು ಕಾಲೇಜಿಗೆ ರೋಟರಿ ಸಂಸ್ಥೆಯ ಕೊಡುಗೆಗಳನ್ನು ಸ್ಮರಿಸಿದರು. ರೋಟರಿ ಕ್ಲಬ್ ಮಣಿಪಾಲ ಇದರ ಅಧ್ಯಕ್ಷರಾದ ರೋಟೇರಿಯನ್ ಶಶಿಕಲಾ ರಾಜವರ್ಮ, ಕಾರ್ಯದರ್ಶಿಗಳಾದ ರೋಟೇರಿಯನ್ ವಾಣಿಶ್ರೀ, ರೋಟೇರಿಯನ್ ವೇದ ಸುವರ್ಣ, ಇಂಟರಾಕ್ಟ್ ಕ್ಲಬ್ ನ ಮಾರ್ಗದರ್ಶಕರಾದ ಶ್ರೀಮತಿ ಶಾಲಿನಿ, ವಸಂತ ಜೋಗಿ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕುಮಾರಿ ಅಕೀಫಾ ತನ್ಸೀಮ್ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಸುಸೈಫಾ ಕಾರ್ಯಕ್ರಮವನ್ನು ನಿರೂಪಿಸಿ, ಆಸ್ಮಿಯಾ ವಂದಿಸಿದರು. ದಿವ್ಯಶ್ರೀ, ಶಮನಾ ಹಾಗೂ ಮಾನ್ಯ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ಯಾದಿಯನ್ನು ಓದಿದರು. ವಿಜೇತರಿಗೆ ಪುಸ್ತಕ ಬಹುಮಾನ ವಿತರಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!