spot_img
Friday, March 13, 2026
spot_img

ಮೂಡ್ಲಕಟ್ಟೆ ಐಎಂಜೆ: ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳನ್ನು ಸ್ವಾಗತಿಸಿದ  ‘ಸಂಕಲ್ಪ್ 2025’ ಫ್ರೆಶರ್ಸ್ ಡೇ

ಮೂಡ್ಲಕಟ್ಟೆ : ಆಗಸ್ಟ್ 30, 2025: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಂಕಲ್ಪ್ – 2025’ ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಹಿರಿಯ ವಿದ್ಯಾರ್ಥಿಗಳು ಸಂಗೀತ, ನೃತ್ಯ ಮತ್ತು ಮನೋರಂಜನೆಯಿಂದ ತುಂಬಿದ ಸಾಂಸ್ಕೃತಿಕ ಚಟುವಟಿಕೆಯನ್ನು ಆಯೋಜಿಸುವ ಮೂಲಕ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳನ್ನು  ಆತ್ಮೀಯವಾಗಿ ಸ್ವಾಗತಿಸಿದರು. ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ದಿನವನ್ನು ಸ್ಮರಣೀಯವಾಗಿಸಲು ವಿವಿಧ ಆಟಗಳು ಮತ್ತು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಪ್ರಮುಖ ಅಂಶವಾಗಿ ಪ್ರಥಮ ಬಿಸಿಎ ವಿದ್ಯಾರ್ಥಿ  ಮೇಘರಾಜನನ್ನು ‘ರಾಜಕುಮಾರ’ ಹಾಗೂ ಪ್ರಥಮ ಬಿಸಿಎ ವಿದ್ಯಾರ್ಥಿನಿ ಕು. ಮೌಲ್ಯ, ‘ರಾಜಕುಮಾರಿ’ ಎಂದು ಆರಿಸಲ್ಪಟ್ಟರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರು, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ, ಬಿಸಿಎ ವಿಭಾಗದ ಮುಖ್ಯಸ್ಥರು, ಉಪನ್ಯಾಸಕ ವೃಂದದವರು, ತೃತೀಯ ಬಿಸಿಎ ಮತ್ತು ದ್ವಿತೀಯ ಬಿಸಿಎ ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಶಿಫಾ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!