spot_img
Friday, March 13, 2026
spot_img

ಉಡುಪಿ ಜಿಲ್ಲೆ ಜಿಲ್ಲಾ ಮಟ್ಟದ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಉಡುಪಿ, ಸೆ.4: ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ರಜತಾದ್ರಿ ಮಣಿಪಾಲ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿ ಬಿಡುಗಡೆ ಮಾಡಿದೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಕುಂದಾಪುರ ತಾಲೂಕು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮರೂರು ಇಲ್ಲಿನ ಸಹ ಶಿಕ್ಷಕಿ ಸರಸ್ವತಿ, ಉಡುಪಿ ತಾಲೂಕು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡ್ಡೆಯಂಗಡಿ ಬೊಮ್ಮರಬೆಟ್ಟು ಇಲ್ಲಿನ ಸಹ ಶಿಕ್ಷಕಿ ವಸುಂಧರ, ಕಾರ್ಕಳ ಪಡುಕಾಡೂರು ಸ.ಹಿ.ಪ್ರಾ ಶಾಲೆಯ ಹರೀಶ ಪೂಜಾರಿ ಎಸ್., ಬೈಂದೂರು ವಲಯದ ಸ.ಕಿ.ಪ್ರಾ.ಶಾಲೆ ಕಿಸ್ಮತಿ ಇಲ್ಲಿನ ಸಹಶಿಕ್ಷಕಿ ಸುಮಂಗಲ ಗಾಣಿಗ, ಬ್ರಹ್ಮಾವರ ತಾಲೂಕು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡುಕೆರೆ ಅಚ್ಲಾಡಿ ಇಲ್ಲಿನ ಸಹ ಶಿಕ್ಷಕಿ ವಿಜಯಾ ಎ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಸ.ಹಿ,ಪ್ರಾ,ಶಾಲೆ ಹೆಸ್ಕತ್ತೂರು ಇಲ್ಲಿನ ಮುಖ್ಯ ಶಿಕ್ಷಕರಾದ ಶೇಖರ ಕುಮಾರ್, ಹಂಗಾರಕಟ್ಟೆ ಸ.ಹಿ.ಪ್ರಾ.ಶಾಲೆ ಸಹ ಶಿಕ್ಷಕಿ ವೀಣಾ, ನಂದಿಕೂರು ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ರಮಣಿ, ಬೈಂದೂರು ವಲಯದ ಸ.ಹಿ.ಪ್ರಾ.ಶಾಲೆ ಕಂಚಿಕಾನು ಇಲ್ಲಿನ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ, ಕಾರ್ಕಳ ತಾಲೂಕು ಮಾಳ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಪ್ರಭಾವತಿ ಪ್ರಶಸಿಗೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲೆ ವಿಭಾಗದಲ್ಲಿ ಕಾರ್ಕಳ ತಾಲೂಕು ಬಜಗೋಳಿ ಪ್ರೌಢಶಾಲೆಯ ಸಹ ಶಿಕ್ಷಕ ಶಶಿಕುಮಾರ್ ಹೆಚ್.ಎಂ., ಉಡುಪಿ ತಾಲೂಕು ಇನ್ನಂಜೆ ಎಸ್.ವಿ.ಹೆಚ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಎ.ನಟರಾಜ ಉಪಾಧ್ಯ, ಬ್ರಹ್ಮಾವರ ಕರ್ನಾಟಕ ಪಬ್ಲಿಕ್ ಸ್ಕೂಲ್ ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ ಕೆ., ಕಂಡ್ಲೂರು ರಾಮ್ಸನ್ ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಸಂತೋಷ, ಹೆಮ್ಮಾಡಿ ಜನತಾ ಪ್ರೌಢಶಾಲೆಯ ಸಹ ಶಿಕ್ಷಕ ಜಗದೀಶ ಶೆಟ್ಟಿ ಅವರಿಗೆ ಪ್ರಶಸಿ ಲಭಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!