spot_img
Friday, March 13, 2026
spot_img

ವಂಡ್ಸೆ ನಿರಾಮಯ ಸೊಸೈಟಿಯಲ್ಲಿ ತರಬೇತಿ ಕಾರ್ಯಾಗಾರ ಉದ್ಘಾಟನೆ

kundapura: ಸಮುದಾಯ ಉಪಶಮನ ಆರೈಕೆ ಕೇಂದ್ರ ವಂಡ್ಸೆ, ನಿರಾಮಯ ಸೊಸೈಟಿಯ ಆರು ಮಂದಿ ಸಿಬ್ಬಂದಿಗಳು, ನಾಲ್ವರು ವೈದ್ಯಾಧಿಕಾರಿಗಳು, 9 ಮಂದಿ ಸಿ.ಎಚ್.ಓಗಳಿಗೆ ತರಬೇತಿ ಕಾರ್ಯಾಗಾರ ಸೆ.1ರಂದು ಆರಂಭಗೊಂಡಿತು.

ವಂಡ್ಸೆಯ ನಿರಾಮಯ ಸೊಸೈಟಿಯಲ್ಲಿ ನಡೆದ ತರಬೇತಿ ಕಾರ್ಯಾಗಾರವನ್ನು ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿ ಮಾತನಾಡಿ, ಕರ್ನಾಟಕದಲ್ಲಿ ಪ್ರಥಮವಾಗಿ ಅನುಷ್ಟಾನವಾಗುತ್ತಿರುವ ಈ ಸಮುದಾಯ ಉಪಶಮನ ಆರೈಕೆ ಕೇಂದ್ರ ಯಶಸ್ವಿಯಾಗಿ ಮುನ್ನೆಡೆಯಲಿ. ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ಸ್ಪಂದಿಸುವುದು ಅತ್ಯಂತ ಅಗತ್ಯವಾಗಿದೆ. ಅದಕ್ಕೆ ಪೂರಕವಾದ ತರಬೇತಿಯೂ ಅಗತ್ಯವಿದ್ದು, ನಿರಾಮಯ ಸೊಸೈಟಿಯ ಆಶಯಗಳು ಈಡೇರಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಿರಾಮಯ ಸೊಸೈಟಿ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅವರು ಮಾತನಾಡಿ, ಈಗಾಗಲೇ ಕೇರಳದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ಸಮುದಾಯ ಉಪಶಮನ ಆರೈಕೆ ಕೇಂದ್ರ ಕರ್ನಾಟಕದಲ್ಲಿ ಪೈಲೆಟ್ ಪ್ರಾಜೆಕ್ಟ್ ಆಗಿ ವಂಡ್ಸೆಯಲ್ಲಿ ಅನುಷ್ಟಾನ ಆಗುತ್ತಿದೆ. ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ, ಕೆರಾಡಿ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಈಗಾಗಲೇ ಆರ್ಹ ಫಲಾನುಭವಿಗಳನ್ನು ಗುರುತಿಸಿದ್ದು ಅವರ ಮನೆಗೆ ತೆರಳಿ ಚಿಕಿತ್ಸೆ ನೀಡಲಾಗುತ್ತದೆ. ಆರೋಗ್ಯ ಸೇವೆಯೊಂದಿಗೆ ಈ ಭಾಗಕ್ಕೆ ಅತ್ಯಂತ ಅಗತ್ಯವಾದ ಶವ ಶೀಥಲೀಕರಣ ಘಟಕವನ್ನು ದಾನಿಗಳ ಮೂಲಕ ಪಡೆದು, ಮನೆಯಲ್ಲಿಯೇ ಶವವನ್ನು ಅಂತ್ಯಸಂಸ್ಕಾರದ ತನಕ ಸಂರಕ್ಷಿಸಿ ಇಡಲು ಉಚಿತವಾಗಿ ನೀಡುವ ವ್ಯವಸ್ಥೆಯನ್ನು ಮಾಡುವ ಯೋಜನೆ ರೂಪಿಸಿದ್ದೇವೆ ಎಂದರು.

ಟಿ.ಎಚ್.ಓ ಡಾ.ಪ್ರೇಮಾನಂದ, ನಿರಾಮಯ ಸೊಸೈಟಿಯ ಗೌರವ ಸದಸ್ಯರಾದ ಡಾ.ಅತುಲ್ ಕುಮಾರ್ ಶೆಟ್ಟಿ, ಡಾ.ರಾಜೇಶ ಬಾಯರಿ ಚಿತ್ತೂರು, ಕೆ.ಎಚ್.ಪಿ.ಟಿ (ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್) ಸಂಸ್ಥೆಯ ಸತ್ಯಶ್ರೀ, ಅರುವು ಕೊಲಾಬರೇಟರಿ ಸಂಸ್ಥೆ ಬೆಂಗಳೂರು ಇದರ ನವೀನ್, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವಿರಾಜ್ ಶೆಟ್ಟಿ, ಆಲೂರು ಗ್ರಾ.ಪಂ. ಅಧ್ಯಕ್ಷ ರಾಜೇಶ ದೇವಾಡಿಗ, ಹಕ್ಲಾಡಿ ಗ್ರಾ.ಪಂ ಉಪಾಧ್ಯಕ್ಷ ಸುಭಾಶ ಶೆಟ್ಟಿ, ವಂಡ್ಸೆ ಗ್ರಾ.ಪಂ. ಉಪಾಧ್ಯಕ್ಷ ಗೋವರ್ಧನ್ ಜೋಗಿ, ಇಡೂರು ಕುಂಜ್ಞಾಡಿ ಗ್ರಾ.ಪಂ. ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಚಿತ್ತೂರು ಗ್ರಾ.ಪಂ. ಉಪಾಧ್ಯಕ್ಷೆ ಸುಬ್ಬು, Pallium India ತ್ರಿವೆಂಡ್ರಮ್ ಇಲ್ಲಿನ ತರಬೇತುದಾರರಾದ ಡಾ.ಶಿಥಲ್ ರಾಜ್, ಡಾ.ಅರ್ಜುನ್, ಶೈನಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿ.ಎಚ್.ಓ ಉಪಸ್ಥಿತರಿದ್ದರು.

ನಿರಾಮಯ ಸೊಸೈಟಿ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿ, ಶಿಕ್ಷಕ ಪ್ರತಾಪ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!