spot_img
Wednesday, March 25, 2026
spot_img

ಕುಂದಾಪುರ ಶ್ರೀ ವೆಂಕಟರಮಣ ಪ.ಪೂರ್ವ ಕಾಲೇಜಿನಲ್ಲಿ ಕುಂದಾಪುರ, ಬೈಂದೂರು ತಾಲೂಕುಗಳ ಪ್ರಾಂಶುಪಾಲರ ಸಭೆ

ಕುಂದಾಪುರ, ನ.12: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ನವೆಂಬರ್ 11 ರಂದು ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಪ್ರಾಂಶುಪಾಲರ ಸಭೆಯಲ್ಲಿ 2020-21 ನೇ ಸಾಲಿನ ಆಡಳಿತ ಮತ್ತು ಶೈಕ್ಷಣಿಕ ಚಟುವಟಿಗಳ ಬಗ್ಗೆ ಚರ್ಚಿಸಲಾಯಿತು.

ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಕರಾದ ಭಗವಂತ ಕಟ್ಟಿಮನಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೊರೊನಾ ಎಂಬ ಮಹಾಮಾರಿಯಿಂದಾಗಿ ಪ್ರಸ್ತುತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಆತಂಕ ಉಂಟು ಮಾಡಿದರೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಯೂಟ್ಯೂಬ್ ತರಗತಿಗಳನ್ನು ನಡೆಸುತ್ತಿದ್ದು ಇದನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಬೇಕು, ಡಿಸೆಂಬರ್ ಪ್ರಥಮ ವಾರದಲ್ಲಿ ಪದವಿಪೂರ್ವ ಕಾಲೇಜುಗಳು ಆರಂಭವಾಗಬಹುದು ಎಂಬ ಆಶಯವನ್ನು ವ್ಯಕ್ತಪಡಿಸಿದರು. ಕಾಲೇಜು ಪ್ರಾರಂಭವಾದರೆ ಕಾಲೇಜಿನಲ್ಲಿ ಯಾವ ರೀತಿಯ ಮುಂಜಾಗೃತಾ ಕ್ರಮವನ್ನು ಅನುಸರಿಸಬೇಕು ಎಂದು ತಿಳಿಸಿದರು. ತರಗತಿಯ ಅವಧಿಯನ್ನು ಕಡಿತಗೊಳಿಸುವುದರ ಬಗ್ಗೆ ಸುಳಿವು ನೀಡಿದ ಉಪನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿರುವ ಪ್ರಾಂಶುಪಾಲರುಗಳಿಗೆ ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಒಟ್ಟಾರೆಯಾಗಿ ಶೈಕಣಿಕ ಪ್ರಗತಿ ಸಾಧಿಸಲು ಬೇಕಾದ ಸಂಪೂರ್ಣ ಮಾಹಿತಿ ನೀಡಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ್ರೀ.ಕೆ ರಾಧಾಕೃಷ್ಣ ಶೆಣೈಯವರು ವಹಿಸಿದರು. ಉಡುಪಿ ಜಿಲ್ಲಾ ಪದವಿಪೂರ್ವ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಮಾಧವ್ ಭಟ್ , ಕಾರ್ಯದರ್ಶಿಗಳಾದ ಡಾ. ದಯಾನಂದ ಪೈ ಹಾಗೂ ಶ್ರೀ. ವೆಂಕಟರಮಣ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕಿ ಚಿತ್ರಾ ಕಾರಂತ, ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಸಾಯನಶಾಸ್ತ್ರ ಉಪನ್ಯಾಸಕ ಸಂದೀಪ ಗಾಣಿಗ ವಂದಿಸಿದರು, ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!