spot_img
Friday, March 13, 2026
spot_img

ಹಂಗಾರಕಟ್ಟೆ ಸ.ಹಿ.ಪ್ರಾ ಶಾಲೆ ಶಿಕ್ಷಕಿ ವೀಣಾ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕುಂದಾಪುರ: ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಕೊಡಮಾಡುವ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಬ್ರಹ್ಮಾವರ ಶೈಕ್ಷಣಿಕ ವಲಯದ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ವೀಣಾ ಆಯ್ಕೆಯಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ 18 ವರ್ಷಗಳ ಅನುಭವ ಹೊಂದಿರುವ ಇವರು, ಪರಿಣಾಮಕಾರಿ ಬೋಧನವಿಧಾನ, ಗುಣಾತ್ಮಕ ಶಿಕ್ಷಣ, ಪ್ರಯೋಗಶೀಲತೆ, ವಿದ್ಯಾರ್ಥಿಸ್ನೇಹಿ ಗುಣಗಳ ಮೂಲಕ ಶಿಕ್ಷಣಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಸರಕಾರಿ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಅವರ ಪ್ರತಿಭೆಗೆ ತಕ್ಕ ವೇದಿಕೆ ಒದಗಿಸಿಕೊಡಬೇಕೆನ್ನುವ ವೃತ್ತಿ ಗುರಿ ಹೊಂದಿರುವ ಇವರು, ಆ ನಿಟ್ಟಿನಲ್ಲಿ ಬೋಧನಾ ವಿಧಾನದಲ್ಲಿ ಪ್ರಸಕ್ತತೆಗೆ ಅನುಗುಣವಾಗಿ ಬದಲಾವಣೆಯನ್ನು ಮಾಡಿಕೊಂಡಿದ್ದಾರೆ. ಆಧುನಿಕ ತಂತ್ರಜ್ಞಾನದ ಬಳಕೆ, ವಿದ್ಯಾರ್ಥಿಗಳಲ್ಲಿ ಕಲಿಕಾಂಶದ ದೃಢತೆಯನ್ನು ಉಂಟುಮಾಡುವಲ್ಲಿ ಯಶಸ್ಸು ಕಂಡಿದ್ದಾರೆ.

ಸುಬ್ಬಣ್ಣ ಶೆಟ್ಟಿ ಮತ್ತು ಶ್ರೀಮತಿ ವನಜ ಶೆಟ್ಟಿ ಇವರ ಪುತ್ರಿಯಾದ ಇವರು ಜನವರಿ 18-2007 ರಂದು ಪ್ರಥಮ ವೃತ್ತಿ ಸೇವೆಯನ್ನು ನಕ್ಸಲ್ ಪೀಡಿತ ಪ್ರದೇಶವಾದ ಕಾರ್ಕಳ ವಲಯದ ಮಾಳ ಗ್ರಾಮದ ಸ.ಹಿ.ಪ್ರಾ.ಶಾಲೆ, ಇಂದಿರಾನಗರ, ಮಾಳದಲ್ಲಿ ಪ್ರಾರಂಭಿಸಿದರು. ಅಲ್ಲಿ 9 ವರ್ಷಗಳ ಕಾಲ ಸೇವೆಯನ್ನು ಅಲ್ಲಿ ಪೂರೈಸಿ ನಂತರ 3 ವರ್ಷಗಳ ಕಾಲ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಸಮೂಹ ಸಂಪನ್ಮೂಲ ಕೇಂದ್ರ, ಹೆಬ್ರಿ ಇಲ್ಲಿ ಸೇವೆ ಸಲ್ಲಿಸಿದರು. 2019 ಜುಲೈ 6 ರಿಂದ ಸ.ಹಿ.ಪ್ರಾ.ಶಾಲೆ, ಹಂಗಾರಕಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರು ಮಾರ್ಗದರ್ಶನ ಮಾಡಿದ ವಿದ್ಯಾರ್ಥಿಗಳು ಒಟ್ಟು 11 ಬಾರಿ ರಾಷ್ಟ್ರಮಟ್ಟಕ್ಕೆ 13 ಬಾರಿ ರಾಜ್ಯ ಮಟ್ಟಕ್ಕೆ, ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಸಾಧನೆ ಮಾಡಿದ 6 ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿಜ್ಞಾನ ಕ್ಷೇತ್ರಕ್ಕೆ ಕೆಳದಿ ಚೆನ್ನಮ್ಮ ಮತ್ತು ಹೊಯ್ಸಳ ಪ್ರಶಸ್ತಿ ಲಭಿಸಿರುತ್ತದೆ. ಶಾಲೆಯಲ್ಲಿ ಇಕೋ ಕ್ಲಬ್ ನೋಡಲ್ ಶಿಕ್ಷಕಿಯಾಗಿ ಪರಿಸರ ಸಂಬಂಧಿ ಅನೇಕ ಚಟುವಟಿಕೆಗಳನ್ನು ಹಾಗೂ ಕ್ಷೇತ್ರ ಭೇಟಿಯಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ವಿದ್ಯಾರ್ಥಿಗಳಿಗೆ ಕಲಿಕಾ ಸ್ನೇಹಿ ವಾತಾವರಣವನ್ನು ನಿರ್ಮಿಸಿ ಉತ್ತಮ ಕಲಿಕೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಶಾಲೆಯಲ್ಲಿ ಗಣಿತ ವಿಜ್ಞಾನ ವಿಷಯಕ್ಕೆ ಹೆಚ್ಚಿನ ಒತ್ತು ನೀಡಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಎಳವೆಯಲ್ಲೇ ಮೂಡಿಸುವಲ್ಲಿ ಶ್ರಮಿಸುತ್ತಿದ್ದಾರೆ. ಈ ಶಾಲೆಯಲ್ಲಿ ಸುಸಜ್ಜಿತವಾದ ಗಣಿತ ವಿಜ್ಞಾನ ಪ್ರಯೋಗಾಲಯ ನಿರ್ಮಾಣದಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ.

ಅನೇಕ ತರಬೇತಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ. ಗಣಿತ ಕಲಿಕಾ ಆಂದೋಲನ, ಸಿಸಿಇ, ಎಸ್‍ಡಿಎಂಸಿ ತರಬೇತಿ, ನಿಷ್ಠಾ ತರಬೇತಿ, ಕಲಿಕಾ ಚೇತರಿಕೆ ಮತ್ತು ಮಕ್ಕಳ ಹಬ್ಬ ಇದರ ರಾಜ್ಯಮಟ್ಟದ ತರಬೇತಿಯಲ್ಲಿ ಭಾಗವಹಿಸಿದ್ದಾರೆ. ಸಾಹಿತ್ಯದಲ್ಲಿ ಆಸಕ್ತಿ ಹೊಂದಿರುವ ಇವರು ಕಳೆದ ಸಾಲಿನಲ್ಲಿ ನಡೆದ ಮಕ್ಕಳ ಸಾಹಿತ್ಯ ರಚನಾ ತರಬೇತಿಯಲ್ಲಿ ಭಾಗವಹಿಸಿದ್ದಾರೆ. ಇವರು ರಚಿಸಿದ ‘ಸೊನ್ನೆಯ ತೀರ್ಪು’ ಕಥೆ ಆಯ್ಕೆಗೊಂಡಿದೆ.

ಇವರ ಶಿಕ್ಷಣ ಸೇವೆ, ಸಾಹಿತ್ಯ, ಶಿಕ್ಷಣದ ಕಾಳಜಿ ಗುರುತಿಸಿ ರೋಟರಿ ಕ್ಲಬ್ ಬ್ರಹ್ಮಾವರ ‘ಅವಾರ್ಡ್ ಆಫ್ ಎಕ್ಸಲೆನ್ಸ್’ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬ್ರಹ್ಮಾವರ ಇವರು ಅನುಪಮ ಸೇವಾ ಪ್ರಶಸ್ತಿ, ಲಯನ್ಸ್ ಕ್ಲಬ್ ಬಾರಕೂರು ಇವರು ವಿಜ್ಞಾನ ದಿನಾಚರಣೆಯಂದು ಗೌರವಿಸಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಸಮಿತಿ, ಮಾಬುಕಳ, ಇವರನ್ನು ಗುರುತಿಸಿ ಸನ್ಮಾನಿಸಿದ್ದಾರೆ.

ಪತಿ ಉದಯ ಎಸ್. ಶೆಟ್ಟಿ, ಪುತ್ರಿ ಉದ್ಭವಿ ಯು. ಶೆಟ್ಟಿ, ಪುತ್ರ ಉದಿತ್, ಯು. ಶೆಟ್ಟಿ ಇವರೊಂದಿಗಿನ ಸಂತೃಪ್ತ ಕುಟುಂಬ ಇವರದ್ದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!