spot_img
Friday, March 13, 2026
spot_img

ಹೆಮ್ಮಾಡಿ ಜನತಾ ಪ್ರೌಢಶಾಲೆಯ ಶಿಕ್ಷಕ ಜಗದೀಶ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕುಂದಾಪುರ: ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಕೊಡಮಾಡುವ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢಶಾಲೆ ವಿಭಾಗದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿ ಇಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಜಗದೀಶ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ.

ಪರಿಣಾಮಕಾರಿ ಕನ್ನಡ ಭಾಷಾ ಬೋಧನೆ, ವಿದ್ಯಾರ್ಥಿಗಳಲ್ಲಿನ ಕಲೆ, ಸಾಹಿತ್ಯ, ಸಾಂಸ್ಕøತಿಕ ಪ್ರತಿಭೆಯನ್ನು ಪ್ರೋತ್ಸಾಹಿಸುವ ಶಿಕ್ಷಕರಾಗಿ, ಪ್ರವೃತ್ತಿಯಲ್ಲಿ ಹವ್ಯಾಸಿ ಕಲಾವಿದರಾಗಿ, ಸಾಂಸ್ಕøತಿಕ ಚಿಂತಕರಾಗಿ, ಶಾಲೆ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ.

ಕುಂದಾಪುರ ತಾಲೂಕು ಕಟ್ ಬೇಲ್ತೂರು ಗ್ರಾಮದ ಹೆಗ್ಡೆ ಮನೆ ಶಿವರಾಮ ಶೆಟ್ಟಿ ಹಾಗೂ ಶ್ರೀಮತಿ ಭವಾನಿ ಶೆಟ್ಟಿ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ.ಶಾಲೆ ಮತ್ತು ಸ.ಹಿ.ಪ್ರಾ.ಶಾಲೆ ಹೆಮ್ಮಾಡಿಯಲ್ಲಿ, ಪ್ರೌಢ ಶಿಕ್ಷಣವನ್ನು ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ವಂಡ್ಸೆಯಲ್ಲಿ, ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದು ತದನಂತರ ಕಾರವಾರದ ಶಿವಾಜಿ ಕಾಲೇಜಿನಲ್ಲಿ ಬಿ.ಎಡ್. ಪದವಿ ಪಡೆದು ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ನಂತರ ಶಿಕ್ಷಕ ವೃತ್ತಿಯಲ್ಲಿ ಆಸಕ್ತಿ ಹೊಂದಿದ ಇವರು ಕುಂದಾಪುರದ ಎಚ್.ಎಂ.ಎಂ. ಅಂಗ್ಲ ಮಾಧ್ಯಮ ಶಾಲೆ ಹಾಗೂ ವಿ.ಕೆ.ಆರ್ ಅಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಮತ್ತು ಸಾಂಸ್ಕೃತಿಕ ವಿಭಾಗದ ಮಾರ್ಗದರ್ಶಿ ಶಿಕ್ಷಕರಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಯಕ್ಷಗಾನ, ನೃತ್ಯ, ಸಂಗೀತ ಮುಂತಾದ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿದ್ದ ಇವರು ಬೈಂದೂರು ಬಂಟರ ಸಂಘದ ಸದಸ್ಯರಾಗಿ, ಅಲ್ಲದೆ ಜೆ.ಸಿಐ ಕುಂದಾಪುರದ ರೋಟರಿ ಸದಸ್ಯರಾಗಿ ಉತ್ತಮ ಸೇವೆ ಹಾಗೂ ಅಲ್ಲಿ ನಡೆಯುವ ಅನೇಕ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿ ಅನೇಕ ಬಹುಮಾನಗಳನ್ನು ಗಳಿಸಿದ್ದಾರೆ. ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಯಲ್ಲಿ ಸಾಂಸ್ಕøತಿಕ ಅಭಿರುಚಿ ಬೆಳೆಸಿ, ಅವರಲ್ಲಿ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಸ್ಪರ್ಧೆಗಳಲ್ಲಿ ಭಾಗವಹಿಸಲು ಸ್ಫೂರ್ತಿ ತುಂಬುವುದರ ಮೂಲಕ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಇವರು ಶ್ರಮಿಸಿದ್ದಾರೆ.

ತಮಗಿಷ್ಟವಾದ ಶಿಕ್ಷಣ ವೃತ್ತಿಯನ್ನು ಆಯ್ದುಕೊಂಡು ದಿನಾಂಕ 30-03-2009ರಂದು ತಾವು ಕಲಿತ ಶಾಲೆ ಮತ್ತು ಮತ್ತು ಕಲಿಸಿದ ಶಿಕ್ಷಕರ ಜೊತೆ ಹೆಮ್ಮಾಡಿ ಜನತಾ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜನತಾ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ, ಉತ್ತಮ ತರಗತಿ ಶಿಕ್ಷಕರಾಗಿ ಸದಾ ಶಾಲಾ ಅಭಿವೃದ್ಧಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ, ಉತ್ತಮ ಕಾರ್ಯಕ್ರಮ ನಿರೂಪಕರಾಗಿ, ನೃತ್ಯ ತರಬೇತುದಾರರಾಗಿ, ಹವ್ಯಾಸಿ ಯಕ್ಷಗಾನ ಕಲಾವಿದರಾಗಿ, ಶ್ರೀ ಭದ್ರಮಹಾಕಾಳಿ ಯಕ್ಷಗಾನ ಕಲಾತಂಡ ಕಟ್ ಬೇಲ್ತೂರು ಸಂಘದ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉತ್ತಮ ರಂಗನಟರು ಆಗಿರುವ ಇವರು ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ರೋಟರಿ ಇಂಡಿಯಾ ಲಿಟ್ಲರಸಿ ವತಿಯಿಂದ ಶೈಕ್ಷಣಿಕ ಕ್ಷೇತ್ರ, ಸಾಹಿತ್ಯ, ಸಾಂಸ್ಕೃತಿಕ ರಂಗಗಳಲ್ಲಿ ಬಹುಮುಖ ಪ್ರತಿಭೆಯನ್ನು ಗುರುತಿಸಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡ ಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿ ಇವರಿಗೆ ಲಭಿಸಿದೆ.

ಪತ್ನಿ ಶ್ರೀಮತಿ ಸುನಿತಾ ಶೆಟ್ಟಿ ಹಾಗೂ ಪುತ್ರ ಸಮೃದ್ಧ ಶೆಟ್ಟಿ, ಪುತ್ರಿ ಸಾನಿಧ್ಯ ಶೆಟ್ಟಿ ಅವರೊಂದಿಗಿನ ಸಂತೃಪ್ತ ಕುಟುಂಬ ಇವರದ್ದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!