spot_img
Thursday, March 19, 2026
spot_img

ಕಂಡ್ಲೂರು ರಾಮ್ಸನ್ ಪ್ರೌಢಶಾಲೆಯ ಶಿಕ್ಷಕ ಸಂತೋಷ ಅವರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕುಂದಾಪುರ: ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಕೊಡಮಾಡುವ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢಶಾಲೆ ವಿಭಾಗದಲ್ಲಿ ಕುಂದಾಪುರ ತಾಲೂಕು ಕಂಡ್ಲೂರು ರಾಮ್ಸನ್ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂತೋಷ್ ಇವರು ಆಯ್ಕೆಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಸರ್ಕಾರಿ ಪ್ರೌಢಶಾಲೆ ಮಡೇನಹಳ್ಳಿಯಲ್ಲಿ 2006ರಲ್ಲಿ ವೃತ್ತಿ ಬದುಕನ್ನು ಆರಂಭಿಸಿದ ಇವರು ಅಲ್ಲಿ 4 ವರ್ಷ ಅಲ್ಲಿ ಕರ್ತವ್ಯ ನಿರ್ವಹಿಸಿ, 2009ರಿಂದ ರಾಮ್ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಅತ್ಯುತ್ತಮ ಫಲಿತಾಂಶದೊಂದಿಗೆ ವಿದ್ಯಾರ್ಥಿಗಳಲ್ಲಿ ಮೌಲ್ಯ, ನೈತಿಕತೆಯನ್ನು ಬೆಳೆಸುವಲ್ಲಿ ಶ್ರಮಿಸಿ ಶಾಲಾಭಿವೃದ್ಧಿ ಸಮಿತಿಯವರೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು, ಸಂಸ್ಥೆಯ ಬೆಳವಣಿಗೆಯಲ್ಲಿ ಹಳೆ ವಿದ್ಯಾರ್ಥಿಗಳನ್ನು ಸಂಘಟಿಸಿ, ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಸಂಯೋಜಿಸಿ, ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ.

ಯುವ ಉತ್ಸಾಹಿ ಶಿಕ್ಷಕರಾಗಿ ವಿದ್ಯಾರ್ಥಿಗಳ ಪ್ರೀತಿ ಗೌರವ ಸಂಪಾದಿಸಿಕೊಂಡಿರುವ ಇವರು ಗುಣಮಟ್ಟದ ಶಿಕ್ಷಣ, ಪರಿಣಾಮಕಾರಿ ಬೋಧನಾಕ್ರಮಗಳನ್ನು ಅಳವಡಿಸಿಕೊಂಡು ಯಶಸ್ಸು ಕಂಡಿದ್ದಾರೆ. ಇವರ ಕರ್ತವ್ಯಶೀಲತೆ, ಶಿಕ್ಷಣಪ್ರೇಮ, ಬೋಧನಕ್ರಮ, ಶಾಲೆಯ ಭೌತಿಕ ಪ್ರಗತಿಯಲ್ಲಿ ಆಸಕ್ತಿ, ಸಾರ್ವಜನಿಕ ಸಹಭಾಗಿತ್ವ, ಶಿಕ್ಷಣ ಸಂಸ್ಥೆಯನ್ನು ಬೆಳೆಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!