spot_img
Friday, March 13, 2026
spot_img

ಕೌಶಲ್ಯಾಧರಿತ ಶಿಕ್ಷಣ-ಆಲೋಚನೆಗೆ ಇದು ಸಕಾಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ ಶೈಕ್ಷಣಿಕ ವಲಯ ಮಟ್ಟದ ಶಿಕ್ಷಕರ ದಿನಾಚರಣೆ

ಕುಂದಾಪುರ, ಸೆ.5: ಪ್ರಸ್ತುತ ಕಾಲಘಟ್ಟದಲ್ಲಿ ಯಾವ ರೀತಿಯ ಶಿಕ್ಷಣ ನೀಡಬೇಕು ಎನ್ನುವ ಆತ್ಮವಿಮರ್ಶೆ ಮಾಡಿಕೊಳ್ಳುವ ಸಕಾಲವಿದು. ಇವತ್ತು ಶಿಕ್ಷಣ ಪಡೆಯುವ ಶೇ.1ರಷ್ಟು ಮಂದಿಗೆ ಮಾತ್ರ ಸರಕಾರಿ ಉದ್ಯೋಗ ಸಿಗುತ್ತದೆ. ಉಳಿದವರು ಖಾಸಗಿ ಹಾಗೂ ಸ್ವಂತ ಉದ್ಯೋಗಗಳ ಮೂಲಕ ಬದುಕು ಕಟ್ಟಿಕೊಳ್ಳಬೇಕಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಕೌಶಲ್ಯಗಳನ್ನು ಕಲಿಸಬೇಕಾದ ಅನಿವಾರ್ಯತೆಯೂ ಇದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಟಾನ ಅನಿವಾರ್ಯವಾಗುತ್ತದೆ. ಈ ಬಗ್ಗೆ ಸಮಾಜ ಮತ್ತು ಶಿಕ್ಷಕರ ನಡುವೆ ಚರ್ಚೆ ಆಗಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಕುಂದಾಪುರದ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯದ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಸಿಗುವ ಸಂದರ್ಭದಲ್ಲಿ ದೇಶದಲ್ಲಿ 13% ಮಂದಿ ಸಾಕ್ಷರರಿದ್ದರು. ಈಗ 97% ಸಾಕ್ಷರತೆ ಸಾಧಿಸಿದ್ದೇವೆ. ಶಿಕ್ಷಣದಲ್ಲಿ ಹೆಚ್ಚಳ ಸಾಧಿಸಿದರೂ ಕೂಡಾ ಅಪರಾಧದ ಪ್ರಮಾಣ ಜಾಸ್ತಿಯಾಗುತ್ತಲೇ ಇದೆ. ಇದಕ್ಕೆ ಕಾರಣ ಸಂಸ್ಕಾರಯುತ ಶಿಕ್ಷಣದ ಕೊರತೆಯನ್ನು ಕಾಣುತ್ತಿದ್ದೇವೆ. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸುವ ಕೆಲಸ ಆಗಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಸಾಹಿತಿ, ಶಿಕ್ಷಕ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಮಾತನಾಡಿ, ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ಇದನ್ನು ಶಿಕ್ಷಕರು ಅರ್ಥ ಮಾಡಿಕೊಳ್ಳಬೇಕು, ಶಿಕ್ಷಕರು ಶಿಕ್ಷಣ ನೀಡುವುದು ಯಾರನ್ನೂ ಮೆಚ್ಚಿಸುವುದಕ್ಕಲ್ಲ. ನಮ್ಮ ಆತ್ಮಕ್ಕೆ ಖುಷಿಕೊಡುವಂತೆ ಕೆಲಸ ಮಾಡಬೇಕು, ಅನುಭವವನ್ನು ಮಂಥನ ಮಾಡಿದಾಗ ಜ್ಞಾನ ಸಂಪನ್ನವಾಗುತ್ತದೆ. ಪುಸ್ತಕದ ಜ್ಞಾನದೊಂದಿಗೆ ಅನುಭವದ ಜ್ಞಾನವನ್ನು ಬೇರೆತಾಗ ಬೋಧನೆ ಪರಿಪಕ್ವತೆ ಕಾಣುತ್ತದೆ. ಶಿಕ್ಷಣ ಇರುವುದು ಬದುಕನ್ನು ಎದುರಿಸಲು, ಮಾತಿಗಿಂತ ಕ್ರಿಯೆ ಮುಖ್ಯ ಎಂದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಆಯುಕ್ತರಾದ ರಶ್ಮಿ ಎಸ್., ಕುಂದಾಪುರ ನಗರ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ರವಿಕುಮಾರ್ ಹುಕ್ಕೆರಿ, ಬಂಟರ ಸಂಘದ ಸಂಚಾಲಕ ಸಂಪತ್ ಕುಮಾರ್ ಶೆಟ್ಟಿ, ಗೀತಾ ಎಸ್. ಫೌಂಡೇಶನ್ ಕೋಟೇಶ್ವರದ ಇದರ ಶಂಕರ ಐತಾಳ್ ಅಮಾಸೆಬೈಲು, ಜಿಲ್ಲಾ ಪ್ರಶಸ್ತಿ ಪುರಸ್ಕøತ ನಿವೃತ್ತ ಶಿಕ್ಷಕ ನವೀನಚಂದ್ರ ಹೆಗ್ಡೆ ತೊಂಭತ್ತು, ವಿವಿಧ ಶಿಕ್ಷಕರ ಸಂಘಟನೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಿವೃತ್ತರಾದ ಶಿಕ್ಷಕರನ್ನು ಗೌರವಿಸಲಾಯಿತು. ಕಳೆದ ಸಾಲಿನಲ್ಲಿ ಪ್ರಶಸ್ತಿ ಪುರಸ್ಕøತ ಶಿಕ್ಷಕರನ್ನು ಅಭಿನಂದಿಸಲಾಯಿತು. ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಆಚಾರ್ ವಿರಚಿತ ಯಕ್ಷಗಾನ ಪ್ರಸಂಗ ಚಂದ್ರ ಚಮುರ ಬಿಡುಗಡೆಗೊಳಿಸಲಾಯಿತು.

ಬಿ.ಆರ್.ಸಿ ತಂಡದವರು ನಾಡಗೀತೆ ಹಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ಬಿ.ಆರ್.ಪಿ ಸಂತೋಷ್ ಕುಮಾರ್ ಶೆಟ್ಟಿ ಕುಂದಾಪುರ, ಸುಕನ್ಯಾ, ಅಮಾಸೆಬೈಲು ಶಾಲೆಯ ಮುಖ್ಯಶಿಕ್ಷಕ ಶಶಿಧರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!