spot_img
Friday, March 13, 2026
spot_img

ಜೀವನಾನುಭವ ಬದುಕಿನ ಬಹುದೊಡ್ಡ ಪಾಠ-ಸಬ್ಲಾಡಿ ಮಂಜಯ್ಯ ಶೆಟ್ಟಿ

ಕುಂದಾಪುರ: ಪದವಿ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಮುಖ್ಯ. ಇಲ್ಲಿ ಅಂಕಗಳಿಗಿಂತಲೂ ಕೌಶಲ್ಯಗಳಿಗೆ ಹೆಚ್ಚು ಪ್ರಾಧ್ಯಾನತೆಯಿದ್ದು, ವಿದ್ಯಾರ್ಥಿಗಳಿಗೆ ನಾಯಕತ್ವ, ಕ್ರಿಯಾಶೀಲ ಗುಣಗಳನ್ನು ಬೆಳೆಸಿಕೊಳ್ಳಲು ಹಲವಾರು ಅವಕಾಶಗಳಿದ್ದು, ಅಂತಹ ಅವಕಾಶಗಳ ಸದುಪಯೋಗ ಪಡೆದುಕೊಳ್ಳಿ ಹಾಗೂ ಜೀವನಾನುಭವ ಬದುಕಿನ ಬಹುದೊಡ್ಡ ಪಾಠ ಎಂದು ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಫ್ರೆಶರ್ಸ್ ಡೇ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳ ಪದವಿ ಜೀವನಕ್ಕೆ ಶುಭಹಾರೈಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್.ಕ್ಯೂ.ಎ.ಸಿ. ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಶ್ರೀಶಾಂತ್ ಮತ್ತು ತಂಡ ಪ್ರಾರ್ಥಿಸಿ, ರಕ್ಷಿತ್ ಸ್ವಾಗತಿಸಿ, ಸಮರ್ಥ ಅತಿಥಿಗಳನ್ನು ಪರಿಚಯಿಸಿದರು. ವಿಶ್ವನಾಥ್ ಶೆಟ್ಟಿ ವಂದಿಸಿ, ಅಭಿಷೇಕ್ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!