spot_img
Tuesday, April 28, 2026
spot_img

ನಾರಾಯಣ ಗುರುಗಳು ಮಾನವ ಜನಾಂಗದ ಗುರು-ಶಾಸಕ ಕಿರಣ್ ಕುಮಾರ್ ಕೊಡ್ಗಿ

ಕುಂದಾಪುರದಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ

ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ತಮ್ಮ ಇಡೀ ಜೀವನವನ್ನು ಸಮಾಜಕ್ಕಾಗಿ ಮುಡಿಪಾಗಿಟ್ಟವರು. ಅಸ್ಪೃಶ್ಯತೆ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡವರು ಶ್ರೀ ನಾರಾಯಣ ಗುರುಗಳು. ಜಗತ್ತಿನಲ್ಲಿರುವುದು ಒಂದೇ ಜಾತಿ ಒಂದೇ ಮತ ಹಾಗೂ ಒಂದೇ ದೇವರು ಎಂಬ ತತ್ವವನ್ನು ಪ್ರತಿಪಾದಿಸಿದರು. ಕೇರಳದಲ್ಲಿ ಅತಿ ಹೆಚ್ಚು ಸಾಮಾಜಿಕ ಬದಲಾವಣೆಗಳನ್ನು ಮಾಡಿರುವ ವ್ಯಕ್ತಿ ಎಂದರೆ ಅದು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಸಂದೇಶಗಳನ್ನು ಮೈಗೂಡಿಸಿಕೊಂಡು ನಮ್ಮಲ್ಲಿ ಅಳವಡಿಸಿಕೊಳ್ಳೋಣ ಸಾಧ್ಯವಾದದ್ದು ಅವರು ಹೇಳಿಕೊಟ್ಟ ಶಾಂತಿ ಪಥದಲ್ಲಿ ನಡೆಯೋಣ ಆ ದಾರಿಯಲ್ಲಿಯೇ ನಡೆದು ಕೃತರ್ಥರಾಗಲು ಪ್ರಯತ್ನಿಸೋಣ ಎಂದು ಶ್ರೀ ನಾರಾಯಣ ಗುರುಗಳು ಕೇವಲ ಒಂದು ಜನಾಂಗದ ಗುರುವಲ್ಲ ಮಾನವ ಜನಾಂಗದ ಗುರು ವಿಶ್ವ ಮಾನವ ಗುರು ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ತಾಲೂಕು ಆಡಳಿತ ಕುಂದಾಪುರ ವತಿಯಿಂದ ಆಯೋಜಿಸಲಾದ 171ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ.ಆರ್., ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ರವಿಕುಮಾರ್ ಹುಕ್ಕೇರಿ, ಕುಂದಾಪುರ ಪುರಸಭೆಯ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಕುಂದಾಪುರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ,ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ತಾ, ಹೆಮ್ಮಾಡಿ ಜನತಾ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ನಾಗರಾಜ್, ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!