spot_img
Friday, March 13, 2026
spot_img

ಮೌಲ್ಯಗಳ ಪರಿಪಾಲನೆಯಿಂದ ದಿನಾಚರಣೆ ಸಾರ್ಥಕ – ನರೇಂದ್ರ ಎಸ್ ಗಂಗೊಳ್ಳಿ.

ಗಂಗೊಳ್ಳಿ: ನಾರಾಯಣ ಗುರುಗಳ  ಆದರ್ಶಗಳನ್ನು ಮತ್ತು ಉನ್ನತ ಮೌಲ್ಯಗಳನ್ನು ಅರಿತುಕೊಂಡು ಅದನ್ನು ನಮ್ಮ ಜೀವನದಲ್ಲಿ ಪರಿಪಾಲನೆ ಮಾಡಿದಾಗಲೇ  ಜನ್ಮದಿನಾಚರಣೆ  ನಿಜವಾದ ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ. ಎಂದು ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯ ಪಟ್ಟರು.
 ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
 ನಾರಾಯಣ ಗುರುಗಳ ವಿಶ್ವಮಾನವ ತತ್ವವನ್ನು ಈ ಜಗತ್ತಿನ ಪ್ರತಿಯೊಬ್ಬರು ಮನಗಾಣಬೇಕು. ಆ ಮೂಲಕ ಸೌಹಾರ್ದಯುತವಾದ ಸಾಮರಸ್ಯದ  ಬದುಕು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
 ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸದಸ್ಯರಾದ  ಶಂಕರ ಪೂಜಾರಿ  , ಗೋಪಾಲ ಚಂದನ್,  ರಾಮಚಂದ್ರ ಪೂಜಾರಿ, ಚಂದ್ರಕಾಂತ ಪೂಜಾರಿ  ಹಾಗು ವಸಂತ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ  ಜಿ ಎ ಆರ್ ಲಕ್ಷ್ಮಣ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!