spot_img
Friday, March 13, 2026
spot_img

ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆಯ ಉದ್ಘಾಟನೆ

ಕುಂದಾಪುರ; ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ವತಿಯಿಂದ ಉದ್ಘಾಟನೆ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮವು ಜರುಗಿತು.

ಸಮಾರಂಭದಲ್ಲಿ ಹೋಲಿ ರೋಜರಿ ಚರ್ಚ್ ನ ಪ್ರದಾನ ಧರ್ಮಗುರುಗಳು ಹಾಗೂ ಸಂತ ಮೇರೀಸ್ ಮತ್ತು ಹೋಲಿ ರೋಜರಿ ಸಂಸ್ಥೆಗಳ ಸಂಚಾಲಕರಾಗಿರುವ ಅತೀ ವಂದನೀಯ ಗುರುಗಳಾದ ಪೌಲ್ ರೆಗೋರವರು ಅಧ್ಯಕ್ಷತೆ ವಹಿಸಿ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಸಾಧನೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಜಯಕರ ಶೆಟ್ಟಿಯವರು ರೆಡ್ ಕ್ರಾಸ್ ಸಂಸ್ಥೆ ಬೆಳೆದು ಬಂದ ಬಗೆ, ಉದ್ದೇಶ ಹಾಗೂ ಅದರ ಕಾರ್ಯ ಕಲಾಪಗಳ ವಿವರ ತಿಳಿಸಿ ತಾರತಮ್ಯವಿಲ್ಲದೇ ಒಗ್ಗಟ್ಟು, ಮಾನವೀಯ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ರೆಡ್ ಕ್ರಾಸ್ ಸಂಸ್ಥೆಯ ಉದ್ಧೇಶ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಡಾ. ಸೋನಿ ಡಿ’ಕೋಸ್ತಾ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ನೀಡಿದರು.

ರೆಡ್ ಕ್ರಾಸ್ ಖಜಾಂಜಿ ಶಿವರಾಮ ಶೆಟ್ಟಿಯವರು ಉಪಸ್ಥಿತರಿದ್ದು ರೆಡ್ ಕ್ರಾಸ್ ನ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ., ಶಾಲಾ ರೆಡ್ ಕ್ರಾಸ್ ಅಧ್ಯಕ್ಷ ಇಸಾನ್ ಅಲಿ ಉಪಸ್ಥಿತರಿದ್ದರು. ಶಾಲಾ ರೆಡ್ ಕ್ರಾಸ್ ಸಂಯೋಜಕಿ ನಿಖಿತಾ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿನಿ ಸಿಯೋನ್ನಾ ಚಾರ್ಲೊತ್ ಕಾರ್ಯಕ್ರಮ ನಿರೂಪಿಸಿ ವಿದ್ಯಾರ್ಥಿನಿ ವಿಯಾನ್ಸಾ ಮೊಂತೆರೊ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!