spot_img
Friday, March 13, 2026
spot_img

ಕೋಟೇಶ್ವರ ಕೆಪಿ‌ಎಸ್ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶಿಕ್ಷಕರ ದಿನಾಚರಣೆ: ಶಿಕ್ಷಕರಿಗೆ ಸನ್ಮಾನ

ಕುಂದಾಪುರ: ಕೆಪಿ‌ಎಸ್ ಪ್ರಾಥಮಿಕ ಶಾಲಾ ವಿಭಾಗ ಕೋಟೇಶ್ವರ ಇಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಾಲೆಯ ಎಲ್ಲಾ ಶಿಕ್ಷಕರನ್ನು ಗೌರವಿಸಿ ಅಭಿನಂದಿಸಲಾಯಿತು.

ಗೌರವಾರ್ಪಣೆ ಸ್ವೀಕರಿಸಿದ ಮುಖ್ಯ ಶಿಕ್ಷಕರಾದ ಚಂದ್ರ ನಾಯ್ಕ್ ಅವರು ಮತ್ತು ಸಹ ಶಿಕ್ಷಕರು ಮಾರ್ಮಿಕವಾಗಿ ತಮ್ಮ ತಮ್ಮ ಅನುಭವವನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಉಡುಪ ವಹಿಸಿದ್ದರು.

ಶಿಕ್ಷಕರನ್ನು ಗೌರವಿಸಿ ಮಾತನಾಡಿದ ನಮ್ಮ ಶಾಲಾ ಹೆಮ್ಮೆಯ ಹಳೆ ವಿದ್ಯಾರ್ಥಿ ಕೊಳನಕಟ್ಟೆ ವಾಸುದೇವರಾವ್ ಕೋಟೇಶ್ವರ ಆಗಿನ ಕಾಲದ ಶಿಕ್ಷಣಕ್ಕೂ ಇವಾಗಿನ ಶಿಕ್ಷಣಕ್ಕೂ ತುಂಬಾ ವ್ಯತ್ಯಾಸ ಇದೆ. ಶಿಕ್ಷಕ ದಿನಾಚರಣೆಯು ಅರ್ಥಪೂರ್ಣ ಆಗಬೇಕು ಅಂತಾದರೆ ಶಿಕ್ಷಕರನ್ನು ಗುರುತಿಸುವ ಕೆಲಸ ಆಗಬೇಕು ಇದು ಅವರ ಕರ್ತವ್ಯ ನಿಷ್ಠೆಯನ್ನು ಹೆಚ್ಚಿಸುತ್ತದೆ ಮತ್ತು ಜಾಗೃತಗೊಳಿಸುತ್ತದೆ ಎಂದರು.

ಗ್ರಾಮಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ ಮಾತನಾಡಿ ಶಿಕ್ಷಕರು ಸಮಾಜದ ಶಿಲ್ಪಿಗಳು. ಅವರಿಂದ ಒಳ್ಳೆಯ ಸಮಾಜ ನಿರ್ಮಾಣ ಆಗಬೇಕು ಅಂತ ಇದ್ದರೆ ಅವರನ್ನು ಗೌರವದಿಂದ ಕಾಣಬೇಕು ಎಂದು ತಿಳಿಸಿ ಶುಭ ಹಾರೈಸಿದರು

ಶೈಕ್ಷಣಿಕ ಸಮಿತಿಯ ಅಧ್ಯಕ್ಷರಾದ ಮನೋಹರ ಪೈ ಯವರು ಮಾತನಾಡಿ ನಾವು ಎಲ್ಲಿ ಗುರು ಹಿರಿಯರನ್ನು ಗೌರವಿಸುತ್ತೇವೆಯೋ ಅಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ ಇವತ್ತು ನಮ್ಮ ಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಹಾಗೂ ಗೌರವ ಶಿಕ್ಷಕರನ್ನು ಗೌರವಿಸಿರುವುದು ಖುಷಿಕೊಟ್ಟಿದೆ ಎಂದರು.

ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಶೆಟ್ಟಿಗಾರ್, ಹಿರಿಯರಾದ ರಂಗನಾಥ ಭಟ್, ಗ್ರಾಮ ಪಂಚಾಯತ್ ಸದಸ್ಯರಾದ ನಾಗರಾಜ ಕಾಂಚನ್, ಪೋಷಕ ಸಮಿತಿಯ ಕಾರ್ಯದರ್ಶಿ ವಿಜಯ ದೇವಾಡಿಗ, ಎಸ್ಡಿ‌ಎಂಸಿ ಸದಸ್ಯರಾದ ಅಶೋಕ್, ರಾಘವೇಂದ್ರ, ಅನುರಾಧ ಹೊಳ್ಳ, ಮಲ್ಲಿಕಾ, ಆಶಾ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಜೇಶ್ ಪ್ರಭು ಮುದ್ದೇರ್ ಕಟ್ಟೆ, ಮನೋಹರ ಪೈ. ಎಸ್.ಡಿ.ಎಂ.ಸಿ ಸದಸ್ಯ ಪ್ರವೀಣ್ ಆಚಾರ್ಯ ಕಾರ್ಯಕ್ರಮದ ವ್ಯವಸ್ಥೆ ಮಾಡಿದರು. ರವೀಂದ್ರ ಕೋಡಿ ಸ್ವಾಗತಿಸಿದರು. ಮುಖ್ಯ ಶಿಕ್ಷಕರಾದ ಚಂದ್ರ ನಾಯ್ಕ್ ಎಚ್ ಪ್ರಾಸ್ತಾವಿಕ ಮಾತನಾಡಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!