spot_img
Monday, April 27, 2026
spot_img

ಕುಂದಾಪುರ ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷರಾಗಿ ಶಾಂತಾ ವಾಸುದೇವ ಪೂಜಾರಿ ಆಯ್ಕೆ

ಕುಂದಾಪುರ: ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಂಗ ಸಂಸ್ಥೆಯಾದ ಬಿಲ್ಲವ ಮಹಿಳಾ ಘಟಕದ 2025-27ನೇ ಸಾಲಿನ ಅಧ್ಯಕ್ಷರಾಗಿ ಯಕ್ಷಗಾನ ಪ್ರಸಂಗಕರ್ತೆ ಶ್ರೀಮತಿ ಶಾಂತಾ ವಾಸುದೇವ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ 23ನೆಯ ವರ್ಷದ ಮಹಿಳಾ ಘಟಕದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಪಾಧ್ಯಕ್ಷರಾಗಿ ಶ್ರೀಮತಿ ಸುಶೀಲಾ ಪದ್ಮನಾಭ ಮತ್ತು ಶ್ರೀಮತಿ ಸುಶೀಲಾ ಶಂಕರ್, ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಸುಧಾಕರ್ ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಪ್ರೇಮಾ ಆನಂದ್ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಶೈಲಾ ಗಂಗಾಧರ್ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀಮತಿ ಸುನೇತ್ರ ಕೋಟ್ಯಾನ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೀಜಾ ಸುರೇಶ್, ಸಂಘಟನಾ ಕಾರ್ಯದರ್ಶಿ ಶ್ರೀಮತಿ ಶೋಭಾ ಮೋಹನ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೀಜಾಡಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.
ಶ್ರೀಮತಿ ಕಲ್ಪನಾ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ಶಾಂತಾ ವಾಸುದೇವ ಪೂಜಾರಿಯವರು ಕುಂದಾಪುರ ಮದ್ದುಗುಡ್ಡೆಯ ನಿವಾಸಿ. ಹುಟ್ಟೂರು ಆನಗಳ್ಳಿ. ಬಾಲ್ಯದಿಂದಲೇ ಯಕ್ಷಗಾನ ಸಾಹಿತ್ಯದ ಒಲವು ಹೊಂದಿದ ಇವರು ಪ್ರಸ್ತುತ ಯಶಸ್ವಿ ಯಕ್ಷಗಾನ ಪ್ರಸಂಗಕರ್ತೆಯಾಗಿ ಗುರುತಿಸಿಕೊಂಡಿದ್ದಾರೆ. ಯಕ್ಷಗಾನ ಸಾಹಿತ್ಯದಲ್ಲಿ ಮಹಿಳಾ ಸಾಧಕಿಯಾಗಿ ರಾಜ್ಯಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಬಿಲ್ಲವ ಸಂಘಟನೆಯಲ್ಲಿಯೂ ತೊಡಗಿಸಿಕೊಂಡಿರುವ ಅವರು ಉತ್ತಮ ನಾಯಕತ್ವವನ್ನು ಹೊಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!