spot_img
Friday, March 13, 2026
spot_img

ಗುಲ್ವಾಡಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸಿಗಾಗಿ ಒತ್ತಾಯಿಸಿ ಪ್ರತಿಭಟನೆ

ಕುಂದಾಪುರ: ಕುಂದಾಪುರದಿಂದ ತಲ್ಲೂರು ಮಾವಿನಕಟ್ಟೆ ಮಾರ್ಗವಾಗಿ ಗುಲ್ವಾಡಿಗೆ ಅಲ್ಲಿಂದ ಸೌಕೂರು, ಕಂಡ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಆರಂಭಿಸಲು ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಹಂಚು ಕಾರ್ಮಿಕರು, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಗುಲ್ವಾಡಿ ಪಂಚಾಯತ್ ಎದುರು ಪ್ರತಿಭಟನೆ ನಡೆಸಿ ಪಂಚಾಯತ್ ಪಿಡಿ‌ಓ ಮುಖಾಂತರ ಸಾರಿಗೆ ಆಯುಕ್ತರಿಗೆ ಮನವಿ ನೀಡಿದರು. ಖಾಸಗಿ ಬಸ್ ಗಳು ಸರಿಯಾದ ಸಮಯಕ್ಕೆ ಬಸ್ ಸಂಚಾರ ನಡೆಸದೆ ಗ್ರಾಮದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಅನಾರೋಗ್ಯ ಪೀಡಿತರಿಗೆ ತುಂಬ ತೊಂದರೆ ಆಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭಿಸುವುದರ ಮುಖಾಂತರ ಮಹಿಳೆಯರಿಗೆ ಶಕ್ತಿ ಯೋಜನೆ, ವಿದ್ಯಾರ್ಥಿಗಳಿಗೆ ಬಸ್ ಪಾಸ್ ದೊರೆಯುವಂತೆ ಮಾಡಬೇಕಾಗಿ ಸಾರಿಗೆ ಪ್ರಾಧಿಕಾರವನ್ನು ಒತ್ತಾಯಿಸಿದರು.

ಹೋರಾಟದ ನೇತೃತ್ವವನ್ನು ಹಂಚು ಕಾರ್ಮಿಕರ ಮುಖಂಡರಾದ ಜಿ ಡಿ ಪಂಜು, ನಾಗರಾಜ್, ಚಂದ್ರ, ಭಾಸ್ಕರ, ಎಚ್.ನರಸಿಂಹ, ಕೃಷಿಕೂಲಿಕಾರರ ಮುಖಂಡರಾದ ನಾಗರತ್ನ, ಶೋಭಾ, ಜೆ‌ಎಂಎಸ್ ಮುಖಂಡರಾದ ಶೀಲಾವತಿ, ಕಟ್ಟಡ ಕಾರ್ಮಿಕರ ಮುಖಂಡರಾದ ಚಂದ್ರಶೇಖರ್ ವಿ, ರೆಹಮಾನ್, ಅಣ್ಣಪ್ಪ , ರಾಜೀವ ಪಡುಕೋಣೆ ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!