spot_img
Friday, March 13, 2026
spot_img

ಹಳ್ಳಾಡಿ ಒಲಂಪಿಕ್ಸ್- 2025: ಕ್ರೀಡಾಕೂಟ ಉದ್ಘಾಟನೆ 

ಹಾಲಾಡಿ: ಪ್ರತಿಯೊಂದು ಕ್ರೀಡೆಯಲ್ಲಿಯೂ ಸೋಲು ಗೆಲುವಿನೊಂದಿಗೆ ಭಾಗವಹಿಸುವಿಕೆಯೂ ಅತಿ ಮುಖ್ಯವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉನ್ನತ ಪ್ರದರ್ಶನವನ್ನು ನೀಡಿ ಜೀವನದಲ್ಲಿ ಯಶಸ್ಸು ಕಾಣುವಂತಾಗಬೇಕೆಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಕರ್ನಾಟಕ ಸರ್ಕಾರ ಶಾಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ತಾಲೂಕು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳ್ಳಾಡಿ- ಹರ್ಕಾಡಿ ಇವರ ಆಶ್ರಯದಲ್ಲಿ ವಲಯ ಮಟ್ಟದ ೧೪ರ ವಯೋಮಾನದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ ಹಳ್ಳಾಡಿ ಒಲಂಪಿಕ್ಸ್ ೨೦೨೫ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳ್ಳಾಡಿ-ಹರ್ಕಾಡಿ ಅಧ್ಯಕ್ಷರಾದ ಚಂದ್ರ ಭಂಡಾರಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಕನ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಶಿರಿಯಾರ, ನಂದಿಕೇಶ್ವರ ಯುವಕ ಮಂಡಲದ ಅಧ್ಯಕ್ಷ ಸಂತೋಷ್, ಹಾಲಾಡಿ ವೃತ್ತ ಶಿಕ್ಷಣ ಸಂಯೋಜಕ ಶೇಖರ್, ಬಿದ್ಕಲಕಟ್ಟೆ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ್ ಆಚಾರ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳ್ಳಾಡಿ- ಹರ್ಕಾಡಿ ಇದರ ಮುಖ್ಯೋಪಾಧ್ಯಾಯಿನಿ ಶೋಭಾವತಿ, ಗ್ರಾ.ಪಂ ಸದಸ್ಯೆ ರಾಜೀವಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಕರು ಸಂಘ ಗ್ರೇಡ್ – ೨ ಅಧ್ಯಕ್ಷ ಕಿಶನ್ ರಾಜ್, ದೈಹಿಕ ಶಿಕ್ಷಕರ ಸಂಘ ಕುಂದಾಪುರ ಇದರ ಅಧ್ಯಕ್ಷರಾದ ಬಾಲಕೃಷ್ಣ ಉದ್ಭವ ಶೆಟ್ಟಿ, ಪ್ರೌಢಶಾಲಾ ದೈಹಿಕ ಶಿಕ್ಷಕರು ಗ್ರೇಡ್ -೧ ಅಧ್ಯಕ್ಷರಾದ ಉದಯ್ ಮಡಿವಾಳ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!