spot_img
Friday, March 13, 2026
spot_img

ಕೆರಾಡಿಯಲ್ಲಿ ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಕುಂದಾಪುರ: ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಸೆ.10ರಂದು ಕೆರಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಯೋಗ ನರಸಿಂಹಸ್ವಾಮಿ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ಅವರು ವಹಿಸಿದ್ದರು.

ಪಂಚಾಯತ್ ಉಪಾಧ್ಯಕ್ಷೆ ಕುಸುಮಾ ಬಿಲ್ಲವ ಹಾಗೂ ಪಂಚಾಯತ್‌ನ ಎಲ್ಲ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೧೦ ಜನ ಬೋಧಕರನ್ನು ಗುರುತಿಸಿ ಗೌರವಿಸಲಾಯಿತು. ಅನಕ್ಷರಸ್ಥರಿಗೆ ಪುಸ್ತಕ ಮತ್ತು ಕಲಿಕಾ ಸಾಧನ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ಸಾಕ್ಷರತಾ ನೋಡಲ್ ಆಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿ ಆರ್ ಪಿ  ರಾಮಕೃಷ್ಣ ದೇವಾಡಿಗ ಹಾಗೂ ಜಿಲ್ಲಾ ಸಾಕ್ಷರತಾ ತಂಡದೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಿದ ನಿವೃತ್ತ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಣಿಗೇರಿ ಇವರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ್ ನಾಯ್ಕ್, ಮಂಜುನಾಥ್ ಆರ್ ದೇವಾಡಿಗ, ರಾಧಿಕಾ ಹಾಗೂ ವಂಡ್ಸೆ ಸಿ ಆರ್ ಪಿ ಎಮ್ ನಾಗರಾಜ್ ಶೆಟ್ಟಿ, ಕರ್ಕುಂಜೆ ಸಿ ಆರ್ ಪಿ ರವಿಚಂದ್ರ, ಶಿರೂರು ಸಿ ಆರ್ ಪಿ ಗಣೇಶ್ ಪೂಜಾರಿ, ಕಂಬದಕೋಣೆ ಸಿ ಆರ್ ಪಿ ರಾಮನಾಥ ಮೇಸ್ತ ಉಪಸ್ಥಿತರಿದ್ದರು.

ಜಿಲ್ಲಾ ವಯಸ್ಕರ ಶಿಕ್ಷಣ ಕೇಂದ್ರದ ಅಸಿಸ್ಟೆಂಟ್ ಪ್ರೋಗ್ರಾಮರ್ ಉಮೇಶ ಆಚಾರ್ಯ ಸ್ವಾಗತಿಸಿದರು. ಕೆರಾಡಿ ಗ್ರಾಮ ಪಂಚಾಯತ್ ಪಿಡಿ‌ಒ ನಾರಾಯಣ ಬನಶಂಕರಿ ವಂದಿಸಿದರು. ಕೆರಾಡಿ ಗ್ರಾಮ ಪಂಚಾಯತ್ ನ ಎಲ್ಲಾ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!