spot_img
Wednesday, March 11, 2026
spot_img

ಎ.ಆರ್.ಎಸ್.ಐ. ಶಂಕರ್ ಅವರಿಗೆ ರಾಷ್ಟ್ರಪತಿ ಪದಕದ ಗೌರವ

ಬೆಂಗಳೂರು : ಉಡುಪಿ ಡಿ.ಎ.ಆರ್.ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಆರ್.ಎಸ್.ಐ ಶಂಕರ್ ಇವರು ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ.

ಆಗಸ್ಟ್ ೩೦ರಂದು ಬೆಂಗಳೂರಿನ ರಾಜ ಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ-2025 ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪದಕ ಪ್ರದಾನ ಮಾಡಿದರು. ಕರ್ತವ್ಯದ ಜೊತೆಯಲ್ಲಿ ಕ್ರೀಡಾಭ್ಯಾಸದಲ್ಲಿ ತೊಡಗಿಕೊಂಡು ಅಂತರಾಷ್ಟ್ರೀಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಇದುವರೆಗೆ ೫೭ ಪದಕ ಪಡೆದಿರುವ ಇವರು ತಮ್ಮ ಕ್ರೀಡಾ ಸಾಧನೆಯ ಮೂಲಕ ಇಲಾಖೆಯ ಘನತೆಯನ್ನು ಹೆಚ್ಚಿಸಿದ್ದಾರೆ.

೨೦೧೪ರಲ್ಲಿ ಮಲೇಶಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ೪೧೦೦ ,೪೪೦೦ ಮೀಟರ್ ರಿಲೇ ಓಟದಲ್ಲಿ ಚಿನ್ನ ಹಾಗೂ ೧೦೦ ,೨೦೦ ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ. ಅಲ್ಲದೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವು ಪದಕಗಳಿಗೆ ಭಾಜನರಾಗಿದ್ದಾರೆ.

೨೬ ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆ, ವೃತ್ತಿನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆ ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಮಾನ್ಯ ರಾಷ್ಟ್ರಪತಿಗಳು ೨೦೨೩ ನೇ ಸಾಲಿನ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಶ್ಲಾಘನೀಯ ಸೇವಾ ಪದಕವನ್ನು ನೀಡಿ ಗೌರವಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!