spot_img
Friday, March 13, 2026
spot_img

ಬಿ.ಬಿ. ಹೆಗ್ಡೆ ಕಾಲೇಜು: ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 3 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಇಂಡಿಯನ್ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕದ ಕಾರ್ಯವೈಖರಿ ಕುರಿತು ವಿವರಿಸಿ, ಕಾಲೇಜಿನ ರೆಡ್‌ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಸಮಾಜದ ಶ್ರೇಯೋಭಿವೃದ್ಧಿಯಲ್ಲಿ ಯುವ ರೆಡ್‌ಕ್ರಾಸ್ ವಿದ್ಯಾರ್ಥಿಗಳು ಬೇರೆ-ಬೇರೆ ಮಜಲುಗಳಲ್ಲಿ ಸೇವಾ ಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ದೀಪಾ ಪೂಜಾರಿ ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರಮೋಕ್ಷ ದ್ವಿತೀಯ ಬಿಸಿ‌ಎ ಹಾಗೂ ವಿದ್ಯಾಶ್ರೀ ದ್ವಿತೀಯ ಬಿ.ಕಾಂ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಚನಾ ಮತ್ತು ತಂಡ ಪ್ರಾರ್ಥಿಸಿದರು.

ಇದೇ ಸಂಧರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಹಾಗೂ ವಿಶ್ವವಿದ್ಯಾಲಯ ಮಟ್ಟದ ಯುವ ರೆಡ್‌ಕ್ರಾಸ್ ಘಟಕದ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಸ್ವಯಂಸೇವಕಿ ಸನ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!