spot_img
Friday, March 13, 2026
spot_img

ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ ಉದ್ಘಾಟನೆ

ಕುಂದಾಪುರ : ಕಳೆದ ಕೆಲವು ವರ್ಷಗಳ ಹಿಂದೆ ಕ್ರೀಡಾ ಪ್ರತಿಭೆಗಳಿದ್ದರೂ ಅವರಿಗೆ ಸರಿಯಾದ ಅವಕಾಶಗಳು ಸಿಗುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಇಲಾಖೆಯಿಂದ ಹಾಗೂ ಶಾಲೆಯಿಂದ ಸ್ಪರ್ಧೆಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಹಲವು ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಲು ಸಾಧ್ಯವಾಗುತ್ತಿದೆ. ಕ್ರೀಡೆಯಲ್ಲಿ ಸೋಲು ಗೆಲವು ಸಾಮಾನ್ಯವಾಗಿದ್ದು, ಎಲ್ಲರೂ ಕ್ರೀಡಾಸ್ಫೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸುವಂತಾಗಬೇಕು ಎಂದು ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ.ವೆಂಕಟೇಶ ಶೆಣೈ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ ೨೦೨೫-೨೬ನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ, ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಸದಸ್ಯ ಕೆ.ರಾಮನಾಥ ನಾಯಕ್, ಉಡುಪಿ ಜಿಲ್ಲೆ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಗೌರವಾಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಚಾಲಕ ರಾಮ ಶೆಟ್ಟಿ ಉಪಸ್ಥಿತರಿದ್ದರು.

ಇಂಗ್ಲೀಷ್ ಉಪನ್ಯಾಸಕ ಥಾಮಸ್ ಪಿ.ಎ. ಸ್ವಾಗತಿಸಿದರು. ಉ‌ಪನ್ಯಾಸಕಿ ಅಕ್ಷಯಾ ಆರ್. ಕಾರ್ಯಕ್ರಮ ನಿರ್ವಹಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್.ಕೆ. ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!