spot_img
Wednesday, March 25, 2026
spot_img

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷರಾಗಿ ಹೆಚ್. ಹರಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಅವಿರೋಧ ಆಯ್ಕೆ

ಕುಂದಾಪುರ, ನ.20: ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿ., ಇದರ ಅಧ್ಯಕ್ಷರಾಗಿ ಎಚ್.ಹರಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಅವಿರೋಧವಾಗಿ ಆಯ್ಕೆಯಾದರು.

ನ.20 ರಂದು ಸಂಘದ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರಾದ ಹೆಚ್.ಹರಿಪ್ರಸಾದ್ ಶೆಟ್ಟಿಯವರು, ಈ ಭಾಗದ ಹಿರಿಯ ಸಹಕಾರಿಗಳು ಕಟ್ಟಿ ಮುನ್ನೆಡಿಸಿದ ಈ ಪ್ರತಿಷ್ಠಿತ ಸಂಸ್ಥೆಯನ್ನು ಎಲ್ಲರ ಸಹಕಾರ, ಮಾರ್ಗದರ್ಶನದಿಂದ ಮುನ್ನೆಡಿಸುವುದಾಗಿ ತಿಳಿಸಿದರು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್.ರಾಜು ಪೂಜಾರಿ ಹಾಗೂ ಮಹೇಶ ಹೆಗ್ಡೆ ಮೊಳಹಳ್ಳಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು. ನಿರ್ದೇಶಕ ಕೆ.ಸುಧಾಕರ ಶೆಟ್ಟಿ ನಿರ್ದೇಶಕರ ಪರವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎಸ್.ರಾಜು ಪೂಜಾರಿ, ಮೋಹನ್ ದಾಸ್ ಶೆಟ್ಟಿ, ಕೆ.ಭುಜಂಗ ಶೆಟ್ಟಿ-ವಂಡ್ಸೆ ರವಿ ಗಾಣಿಗ , ಕೆ.ಮೋಹನ್ ಪೂಜಾರಿ, ಆನಂದ ಬಿಲ್ಲವ, ಕೆ.ಸುಧಾಕರ ಶೆಟ್ಟಿ, ಪ್ರಭಾಕರ ಶೆಟ್ಟಿ ಜಡ್ಕಲ್, ಎಸ್.ಜಯರಾಮ ಶೆಟ್ಟಿ ಬೆಳ್ವೆ, ಚಂದ್ರಶೇಖರ ಶೆಟ್ಟಿ, ದಿನಪಾಲ ಶೆಟ್ಟಿ ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾದ ಕುಂದಾಪುರ ಉಪ ವಿಭಾಗದ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಅಧಿಕೃತ ಘೋಷಣೆ ಮಾಡಿದರು.

ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಶೋಭಾ ಸ್ವಾಗತಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!