spot_img
Thursday, April 2, 2026
spot_img

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆ: 30ಲಕ್ಷಕ್ಕೂ ಮಿಕ್ಕಿ ನಿವ್ವಳ ಲಾಭ | ಶೇ.9 ಡಿವಿಡೆಂಡ್ ಘೋಷಣೆ

ಕುಂದಾಪುರ : ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ 2024-25ನೇ ಸಾಲಿನ ವರ್ಷಾಂತ್ಯಕ್ಕೆ ಒಟ್ಟು 13325 ಸದಸ್ಯರನ್ನು ಮತ್ತು 1.79 ಕೋಟಿ ಪಾಲು ಬಂಡವಾಳವನ್ನು ಹೊಂದಿದೆ. 39.35 ಕೋಟಿ ಠೇವಣಿಯನ್ನು ಹೊಂದಿದ್ದು, 19.63 ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್ ಸಹಕಾರಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಬ್ಯಾಂಕ್ 30.36 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9 ಪಾಲು ಮುನಾಫೆ ನೀಡಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು.

ಗಂಗೊಳ್ಳಿಯ ಶ್ರೀ ರಾಮ ಮಂದಿರದ ಸಭಾಭವನದಲ್ಲಿ ಶುಕ್ರವಾರ ಜರಗಿದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಹಕರಿಗೆ ತ್ವರಿತ ಮತ್ತು ಉತ್ತಮ ಸೇವೆ ನೀಡಲು ಶ್ರಮಿಸಲಾಗುವುದು. ಹೊರಬಾಕಿ ಸಾಲ ವಸೂಲಾತಿಗೆ ಕ್ರಮಕೈಗೊಂಡು ಬ್ಯಾಂಕ್ ಹೆಚ್ಚಿನ ಲಾಭ ಗಳಿಸಲು ಪ್ರಯತ್ನಿಸಲಾಗುವುದು. ಬ್ಯಾಂಕಿನ ಮೂರು ಶಾಖೆಗಳಲ್ಲಿ ಗ್ರಾಹಕರಿಗೆ ಅಗತ್ಯವಿರುವ ಬ್ಯಾಂಕಿಂಗ್ ಸೌಲಭ್ಯ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.

ಇದೇ ಸಂದರ್ಭ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಉಪಾಧ್ಯಕ್ಷ ವಾಸುದೇವ ಶೇರುಗಾರ್, ನಿರ್ದೇಶಕರಾದ ಶ್ರೀನಿವಾಸ ಜತ್ತನ್, ಹರೀಶ ಮೇಸ್ತ, ಕೆ.ಮಾಧವ ಖಾರ್ವಿ, ಜಿ.ಗೋಪಾಲ ನಾಯ್ಕ್, ಪ್ರೇಮಾ ಪೂಜಾರಿ, ಯಮುನಾ, ಚಂದ್ರಮತಿ ಡಿ.ಹೆಗ್ಡೆ, ನಾಗರಾಜ ಎಂ., ಲಕ್ಷ್ಮಣ ಉಪಸ್ಥಿತರಿದ್ದರು.

ಹಿರಿಯ ಗುಮಾಸ್ತ ಜಗದೀಶ ಎನ್.ಪೂಜಾರಿ ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ (ಪ್ರಭಾರ) ರಾಜ್‍ಗೋಪಾಲ ಪೂಜಾರಿ ವರದಿ ಮಂಡಿಸಿ, ಉಪಾಧ್ಯಕ್ಷ ವಾಸುದೇವ ಸೇರುಗಾರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!