spot_img
Thursday, March 12, 2026
spot_img

ಕುಂಭಾಶಿ: ಪೋಷಣ ಅಭಿಯಾನ ಹಾಗೂ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ರಜತ ಮಹೋತ್ಸವ

ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ, ಗ್ರಾಮ ಪಂಚಾಯತ್ ಕುಂಭಾಶಿ, ಸಿದ್ಧಿ ಬುದ್ಧಿ ವೃದ್ಧಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ಅಂಗನವಾಡಿ ಕೇಂದ್ರ ಕುಂಭಾಶಿ, ಜನತಾ ಕಾಲೋನಿ ಅಂಗನವಾಡಿ ಕೇಂದ್ರ ಹಾಗೂ ರೋಟರಿ ಸಮುದಾಯ ದಳ ಕೊರವಡಿ, ಇಶಾ ನಂದಿನಿ ಮಿಲ್ಕ್ ಡೈರಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಹಾಗೂ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಕಾರ್ಯಕ್ರಮ ಸೆ.23ರಂದು ಶ್ರೀ ವಿನಾಯಕ ಸಭಾಭವನ ಕುಂಭಾಶಿಯಲ್ಲಿ ನೆರವೇರಿಸಲಾಯಿತು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಆದ ಉಮೇಶ್ ಟಿ.ಎಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಘವೇಂದ್ರ ಹೆಬ್ಬಾರ್ ಪೋಷಣ ಅಭಿಯಾನ ಮಾಸಾಚರಣೆಯ ಕುರಿತು ಮಾತನಾಡಿದರು. ಕುಂಭಾಶಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಮ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಲಿತಾ, ರೋಟರಿ ಸಮುದಾಯದಳ ಕೊರವಡಿ ಇದರ ಅಧ್ಯಕ್ಷರಾದ ಶ್ವೇತಾ ಶ್ರೀನಿಧಿ, ಬಾಲ ವಿಕಾಸ ಸಮಿತಿ ಅಧ್ಯಕ್ಷ ಸವಿತಾ, ನಿಶಾ , ಆರೋಗ್ಯ ಸುರಕ್ಷಾಧಿಕಾರಿ ಪೂರ್ಣಿಮಾ , ಸಿ ಎಚ್ ಓ ಸುಜಾತ , ಪ್ರಾಯೋಜಕರಾದ ಅರ್ಜುನ್ ದಾಸ್, ಶ್ರೀನಿಧಿ ಉಪಾಧ್ಯ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಕನ್ಯಾ ಶೆಟ್ಟಿ, ಸದಸ್ಯರಾದ ರಾಧಾದಾಸ್ ,ಶೋಭಾ, ಪುಷ್ಪಲತಾ, ಅಂಗನವಾಡಿ ಕಾರ್ಯಕರ್ತರಾದ ವಂದನ ನೇತ್ರಾವತಿ ಶೋಭಾ ಪ್ರಮೀಳಾ ಸಹಾಯಕಿ ಆಶಾ, ನಂದಿನಿ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ೧೦ ಮಂದಿ ಅಂಗನವಾಡಿ ವ್ಯಾಪ್ತಿಯ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಅನ್ನಪ್ರಶನ ಹಾಗೂ ಸಮುದಾಯ ಆರೋಗ್ಯ ದಿನ ಸುಪೋಷಣ ದಿನ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮಂಡಲಗಳ ಒಕ್ಕೂಟದ ಶ್ರೀಮತಿ ರಾಧಾ ದಾಸ್, ವರ್ಗಾವಣೆಗೊಳ್ಳುತ್ತಿರುವ ಪಿಡಿ‌ಓ ಜಯರಾಮ್ ಶೆಟ್ಟಿ, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಪ್ರೇಮಲತಾ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ, ಪೋಷಕರಿಗೆ, ಮಕ್ಕಳಿಗೆ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ, ದ್ವಿತೀಯ ತೃತೀಯ ಬಹುಮಾನವನ್ನು ನೀಡಲಾಯಿತು. ಆಶಾ ಕಾರ್ಯಕರ್ತೆಯರು , ಪೋಷಕರು, ಮಕ್ಕಳು ಉಪಸ್ಥಿತರಿದ್ದರು. ಶಿವಾನಂದ ಕೋಟತಟ್ಟು ಕಾರ್ಯಕ್ರಮ ನಿರೂಪಿಸಿ, ಲಲಿತ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!