spot_img
Thursday, March 12, 2026
spot_img

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಭೇಟಿ

ಕೋಟ: ನಬಾರ್ಡ್‌ನ ಮುಖ್ಯ ಮಹಾಪ್ರಬಂಧಕ ಡಾ. ಸುರೇಂದ್ರ ಬಾಬು ಮತ್ತು ನಬಾರ್ಡ್‌ನ ಡಿಡಿ‌ಎಮ್ ಸಂಗೀತಾ ಕರ್ತ ಇವರು ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಸೆ.೨೦ರಂದು ಭೇಟಿ ನೀಡಿದರು. ಈ ಸಂದರ್ಭ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಇವರು ನಬಾರ್ಡ್ ಅಧಿಕಾರಿಗಳನ್ನು ಸ್ವಾಗತಿಸಿ, ಸಂಘವು ನಡೆದು ಬಂದ ದಾರಿ, ಸದಸ್ಯತ್ವ, ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಸಾಲಗಳು, ಸ್ವ ಸಹಾಯ ಸಂಘ ರಚನೆ, ಸಾಲ ವಿತರಣೆ ಮತ್ತು ವಸೂಲಾತಿ, ಸಂಘದ ಸ್ವಂತ ಕಟ್ಟಡಗಳು ಮತ್ತು ಗೋದಾಮುಗಳು, ಸಂಘದ ವ್ಯವಹಾರ ಅಭಿವೃದ್ಧಿ, ಸದಸ್ಯರಿಗೆ ನೀಡಲಾಗುತ್ತಿರುವ ಸೇವೆಗಳು ಮತ್ತು ಸವಲತ್ತುಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದರು.

ನಬಾರ್ಡ್‌ನ ಮುಖ್ಯ ಮಹಾಪ್ರಬಂಧಕ ಡಾ. ಸುರೇಂದ್ರ ಬಾಬು ಇವರು ಸಂಘದ ಆರ್ಥಿಕ ಅಭಿವೃದ್ಧಿ, ಸಾಲ ನೀಡುವಿಕೆ ಮತ್ತು ವಸೂಲಾತಿ, ಸ್ವಸಹಾಯ ಸಂಘಗಳ ಕಾರ್ಯಚಟುವಟಿಕೆ ಮತ್ತು ಸಂಘದ ಯೋಜನೆಗಳ ಬಗ್ಗೆ ಮಾಹಿತಿ ಪಡೆದು, ಸಂಘದ ವ್ಯವಸ್ಥಿತ ಕಾರ್ಯವೈಖರಿ, ಸೇವಾ ಮನೋಭಾವ ಹಾಗೂ ಕಾರ್ಯತತ್ಪರತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಘದ ಸರ್ವತೋಮುಖ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳನ್ನು ಶ್ಲಾಘಿಸಿದರು. ಸಂಘಕ್ಕೆ ಮೊದಲ ಬಾರಿ ಭೇಟಿ ನೀಡಿದ ನಬಾರ್ಡ್ ಮುಖ್ಯ ಮಹಾಪ್ರಬಂಧಕ ಡಾ. ಸುರೇಂದ್ರ ಬಾಬು ಇವರನ್ನು ಸಂಘದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಎಚ್. ನಾಗರಾಜ ಹಂದೆ, ನಿರ್ದೇಶಕರಾದ ಶ್ರೀ ಜಿ. ತಿಮ್ಮ ಪೂಜಾರಿ, ರಂಜಿತ್ ಕುಮಾರ್, ಚಂದ್ರ ಪೂಜಾರಿ ಪಿ., ಶ್ರೀಮತಿ ವಸಂತಿ ಪೂಜಾರ್ತಿ, ಶ್ರೀಮತಿ ಪ್ರೇಮಾ, ಪಿ. ಶೇಖರ ಮರಕಾಲ, ಮಾಜಿ ನಿರ್ದೇಶಕರಾದ ಅಚ್ಯುತ ಪೂಜಾರಿ, ಪರ್ಷಿಯನ್ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಮತ್ತು ಸಂಘದ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಇವರು ಭೇಟಿ ನೀಡಿದ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು. ತದನಂತರ ಸಂಘದ ನೂತನ ವಿಶಿಷ್ಟ ಯೋಜನೆಗಳಲ್ಲಿ ಒಂದಾದ ಸಕಲ ಕೃಷಿ ಉಪಕರಣಗಳ ಮಾರಾಟ ಮಳಿಗೆಗೆ ಅವರು ಭೇಟಿ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!