spot_img
Thursday, March 12, 2026
spot_img

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಪ್ರಶಸ್ತಿ 

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘವು ಪ್ರಾರಂಭಗೊಂಡು 67 ವರ್ಷಗಳ ಸಾರ್ಥಕ ಸೇವೆಯನ್ನು ನೀಡಿ, 68ನೇ ವರ್ಷದಲ್ಲಿ ಯಶಪ್ರದವಾಗಿ ಮುನ್ನೆಡೆಯುತ್ತಿರುವ ಸಂದರ್ಭ ಸಂಘವು 295 ಕೋಟಿ ಠೇವಣಾತಿ ಹೊಂದಿ, 250 ಕೋಟಿ ಸಾಲ ನೀಡಿದ್ದು, 331 ಕೋಟಿ ದುಡಿಯುವ ಬಂಡವಾಳದೊಂದಿಗೆ ಸತತ 16 ವರ್ಷಗಳಿಂದ ‘ಅ’ ತರಗತಿ ಆಡಿಟ್ ವರ್ಗೀಕರಣ ಹೊಂದಿರುತ್ತದೆ. 2024-25ನೇ ಸಾಲಿನಲ್ಲಿ ಶೇ.98.83ರಷ್ಟು ಸಾಲ ವಸೂಲಾತಿಯೊಂದಿಗೆ 5.83 ಕೋಟಿ ಲಾಭವನ್ನು ಗಳಿಸಿ ಇನ್ನಿತರ ಸಹಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿs ಸಂಘವು ಮುಂಚೂಣಿಯಲ್ಲಿದೆ. 2024-25ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ನಿ. ಮಂಗಳೂರು (ಸ್ಕ್ಯಾಡ್ಸ್) ಇದರ ಕುಂದಾಪುರ ಶಾಖೆಯಿಂದ ಸಂಘವು ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಹಾಗೂ ಬಿಡಿಭಾಗಗಳನ್ನು ಖರೀದಿಸಿ ತನ್ನ ಸದಸ್ಯರಿಗೆ ವಿತರಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿರುತ್ತದೆ.

ದಿನಾಂಕ 25.09.2025ರಂದು ಜರಗಿದ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ನಿ. ಮಂಗಳೂರು (ಸ್ಕ್ಯಾಡ್ಸ್) ಇದರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಾದ  ರವೀಂದ್ರ ಕಂಬಳಿ, ಉಪಾಧ್ಯಕ್ಷರು ಮತ್ತು ಎಲ್ಲಾ ನಿರ್ದೇಶಕರು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಶರತ್ ಕುಮಾರ್ ಶೆಟ್ಟಿ ಇವರಿಗೆ ಅಭಿನಂದನಾ ಪತ್ರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ ಎಚ್. ಎನ್., ಸ್ಕ್ಯಾಡ್ಸ್ ಮತ್ತು ಸಂಘದ ನಿರ್ದೇಶಕರಾದ ಶ್ರೀ ಜಿ. ತಿಮ್ಮ ಪೂಜಾರಿಯವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!