spot_img
Monday, March 16, 2026
spot_img

ಕುಂದಾಪುರದ ಆರ್.ಎನ್.‌ಶೆಟ್ಟಿ‌ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ‌ ‘ ಕೆಮಿವರ್ಸ್ ‘ ಕಾರ್ಯಕ್ರಮ

ಕುಂದಾಪುರ: ” KCET ಮತ್ತು NEET ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಪಡೆದು ವೈಯುಕ್ತಿಕ‌ ಆಯ್ಕೆಯ‌ ಕಾಲೇಜುಗಳನ್ನು ಉನ್ನತ ವ್ಯಾಸಂಗಕ್ಕೆ ಆಯ್ದುಕೊಳ್ಳುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ. ವ್ಯಾಪಕ ಪಠ್ಯಕ್ರಮವಿರುವ ರಸಾಯನ ಶಾಸ್ತ್ರ ವಿಷಯದಲ್ಲಿ ಹೆಚ್ಚು ಒತ್ತು ನೀಡುವ ಓರ್ಗಾನಿಕ್ ರಿಯಾಕ್ಷನ್ ಗಳಂಥ ಕೆಲವು ಅಧ್ಯಾಯಗಳು ವಿದ್ಯಾರ್ಥಿಗಳಿಗೆ ಬಹುಬೇಡಿಕೆಯ ರಾಸಾಯನಿಕ ಉತ್ಪಾದನಾ ಕ್ಷೇತ್ರದಲ್ಲಿ ಬೇಡಿಕೆಯಲ್ಲಿರುವ ಉದ್ಯೋಗ ಪಡೆಯುವಲ್ಲಿ ಸಹಾಯಕವಾಗುತ್ತದೆ ” ಎಂದು ಬೆಳ್ಮಣ್ಣಿನ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಿ.ವಸಂತ್.ಆಚಾರ್ಯ ತಿಳಿಸಿದರು.

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗ ಆಯೋಜಿಸಿದ ‘ ಕೆಮಿವರ್ಸ್’ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸ ಕಾರ್ಯಕ್ರಮದ ಬಳಿಕ ನಡೆದ ಸಂವಾದ ಮತ್ತು‌ ಅಭಿಪ್ರಾಯ ಹಂಚಿಕೆ ಕಾರ್ಯಕ್ರಮದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಶೈನೋಲ್, ಅಮೂಲ್ಯ ಹಾಗೂ ಡಿಯೋನ್‌ ಡಿಸೋಝಾ ತಮ್ಮ ಪ್ರತಿಕ್ರಿಯೆ ಮಂಡಿಸಿದರು.

ರಸಾಯನ‌ ಶಾಸ್ತ್ರ ಉಪನ್ಯಾಸಕಿ‌ ರೇವತಿ‌ ಕಾಮತ್ ಅತಿಥಿಗಳನ್ನು‌ ಸ್ವಾಗತಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಅಕ್ಷತಾ ಶೆಟ್ಟಿ ಅತಿಥಿ ಪರಿಚಯ ಮಾಡಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಜಾನೀಸ್ ನತಾಷಾ ಡಿಸೋಝಾರವರು ಧನ್ಯವಾದ ಸಲ್ಲಿಸಿದರು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಸ್ನೇಹಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!