spot_img
Wednesday, March 25, 2026
spot_img

ಗಾಣಿಗ ಯುವ ಸಂಘಟನೆ ಕೋಟ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಗೇಶ್ ಗಾಣಿಗರಿಗೆ ಗೌರವಾರ್ಪಣೆ

ಈ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರಾದ ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ನಾಡ ನಾಗೇಶ್ ಗಾಣಿಗರಿಗೆ ಗಾಣಿಗ ಯುವ ಸಂಘಟನೆ ಕೋಟ ಘಟಕದ ವತಿಯಿಂದ ನ.22ರಂದು ಸಮ್ಮಾನಿಸಲಾಯಿತು.

ಸಂಘಟನೆಯ ಅಧ್ಯಕ್ಷ ವಿಶ್ವನಾಥ ಗಾಣಿಗ ಸಮ್ಮಾನ ನೆರವೇರೆಸಿ ಮಾತನಾಡಿ, ನಾಗೇಶ್ ಗಾಣಿಗರು ಯಕ್ಷಗಾನ ಕ್ಷೇತ್ರದ ಬಣ್ಣದ ವೇಷದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಿದ್ದಾರೆ. ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ನಮ್ಮ ಸಮಾಜಕ್ಕೆ ಸಂದ ಗೌರವವಾಗಿದೆ. ಇವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನಗಳು ಸಿಗುವಂತಾಗಲಿ ಎಂದರು.

ಸಮ್ಮಾನ ಸ್ವೀಕರಿಸಿದ ನಾಗೇಶ್ ಗಾಣಿಗರು ಮಾತನಾಡಿ, ನಮ್ಮ ಸಮಾಜದ ಸಂಘಟನೆಯೊಂದು ನನ್ನ ಗುರುತಿಸಿ-ಗೌರವಿಸುತ್ತಿರುವುದು ಅತ್ಯಂತ ಸಂತೋಷ ತಂದಿದೆ ಎಂದರು.

ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಂಘಟನೆಯ ಕಾರ್ಯದರ್ಶಿ ನಾಗರಾಜ್ ಗಾಣಿಗ ಸಾಲಿಗ್ರಾಮ, ಗಾಣಿಗ ಯುವ ಸಂಘಟನೆ ಕೋಟ ಘಟಕದ ಕಾರ್ಯದರ್ಶಿ ಗಣೇಶ್ ಗಾಣಿಗ ಚಿತ್ರಪಾಡಿ, ಗೌರವಾಧ್ಯಕ್ಷ ಪ್ರಶಾಂತ್ ಗಾಣಿಗ ಕಾರ್ಕಡ, ಖಜಾಂಚಿ ಗಿರೀಶ್ ಗಾಣಿಗ ಬೆಟ್ಲಕ್ಕಿ ಉಪಸ್ಥಿತರಿದ್ದರು.

ಸಂಘಟನೆಯ ಮಾಜಿ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!