spot_img
Thursday, March 12, 2026
spot_img

ಗಂಗೊಳ್ಳಿ: 51ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಆರಂಭ

ಗಂಗೊಳ್ಳಿ : ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇವರ ಆಶ್ರಯದಲ್ಲಿ ಶ್ರೀ ಶಾರದಾ ಮಹೋತ್ಸವದ 51ನೇ ವರ್ಷದ ಸಮಾರಂಭ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆಯೊಂದಿಗೆ ಸೋಮವಾರ ಆರಂಭಗೊಂಡಿದೆ.

ಶ್ರೀ ಶಾರದಾ ದೇವಿಯ ವಿಗ್ರಹವನ್ನು ಶ್ರೀ ವೀರ ವಿಠಲ ದೇವಸ್ಥಾನದ ಬಳಿಯಿಂದ ವಿವಿಧ ವಾದ್ಯಘೋಷ, ಹುಲಿವೇಷ ಘರ್ಜನೆ, ಕುಣಿತ ಭಜನಾ ತಂಡದ ಮೂಲಕ ಪೂರ್ಣಕುಂಭ ಸ್ವಾಗತದ ಮೂಲಕ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಪುರೋಹಿತರಾದ ಜಿ. ರಾಘವೇಂದ್ರ ನಾರಾಯಣ ಆಚಾರ್ಯರ ನೇತೃತ್ವದಲ್ಲಿ ಮಧ್ಯಾಹ್ನ ಶುಭ ಮುಹೂರ್ತದಲ್ಲಿ ಪ್ರತಿಷ್ಠಾಪಿಸಲಾಯಿತು.

ಸಮಿತಿಯ ಅಧ್ಯಕ್ಷ ಶೇಖರ ಜಿ., ಪ್ರಧಾನ ಕಾರ್ಯದರ್ಶಿ ಪ್ರಶಾಂತ ಎಸ್‌ಆರ್‌ಜಿ, ಕಾರ್ಯದರ್ಶಿ ಎಂ. ಸಂದೀಪ ಖಾರ್ವಿ, ಮಹಿಳಾ ಮಂಡಳಿ ಅಧ್ಯಕ್ಷೆ ರೇಣುಕಾ ವಾಸುದೇವ ಶೇರುಗಾರ್, ಆಡಳಿತ ಮಂಡಳಿ ಪದಾಧಿಕಾರಿಗಳು, ಮಹಿಳಾ ಮಂಡಳಿ ಪದಾಧಿಕಾರಿಗಳು ಭಕ್ತಾದಿಗಳು, ಮತ್ತಿತರರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!