spot_img
Thursday, March 12, 2026
spot_img

ಶಂಕರನಾರಾಯಣ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

ಶಂಕರನಾರಾಯಣ: ರಾಷ್ಟ್ರೀಯ ಸೇವಾ ಯೋಜನೆಯು ಕಾಲೇಜಿನಲ್ಲಿ ಉತ್ತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಾತಾವರಣವನ್ನು ಸೃಷ್ಟಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಸಮಾಜ ಸೇವೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿ ಮಾಡುವಲ್ಲಿ ಸಹಕಾರಿಯಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ನಡೆಸುವ ವಾರ್ಷಿಕ ವಿಶೇಷ ಶಿಬಿರ ವಿದ್ಯಾರ್ಥಿ ಜೀವನದಲ್ಲಿ ಮಹತ್ತರ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಎಲ್ಲಾ ಎನ್ ಎಸ್ ಎಸ್ ಸ್ವಯಂಸೇವಕರು ಕನಿಷ್ಠ ಒಂದು ಬಾರಿಯಾದರೂ ಭಾಗವಹಿಸಬೇಕೆಂದು ಲಕ್ಷ್ಮಿ ಸೋಮ ಬಂಗೇರ ಸ.ಪ್ರ.ದ.ಕಾಲೇಜು ಕೋಟ-ಪಡುಕೆರೆ ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಸಂತೋಷ್ ನಾಯ್ಕ್ ಎಚ್ ಕರೆ ನೀಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ದ್ವಿತೀಯ ಬಿ‌ಎ ವಿದ್ಯಾರ್ಥಿನಿ ಸಿಂಚನ ಮತ್ತು ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಸಿಂಚನ “ದೇಶ ಸೇವೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ” ಎಂಬ ವಿಷಯದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅವರು ಮಾತನಾಡಿ ವಿದ್ಯಾರ್ಥಿಗಳು ಎನ್.ಎಸ್.ಎಸ್ ನಲ್ಲಿ ತೊಡಗಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವಸಂತ್ ಜಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಘಟಕ ೨ರ ಯೋಜನಾಧಿಕಾರಿ ಪ್ರಜ್ಞಾ ಸ್ವಾಗತಿಸಿ, ದ್ವಿತೀಯ ಬಿ‌ಎ ವಿದ್ಯಾರ್ಥಿನಿ ಚೈತನ್ಯಾ ನಿರೂಪಿಸಿದರು. ರತಿಕಾ ಸಂಪನ್ಮೂಲ ವ್ಯಕ್ತಿ ಪರಿಚಯ ಮಾಡಿದರು. ಅಕ್ಷತಾ ಬಿರಾದಾರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!