spot_img
Thursday, March 12, 2026
spot_img

ಕೋಟ ಪಡುಕರೆ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಪ್ರತಿಭಾನ್ವೇಷಣೆ 

ಕೋಟ: ಕೋಟ ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾನ್ವೇಷಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ವಿದ್ಯಾರ್ಥಿಗಳು ಗುರು ಹಿರಿಯರಲ್ಲಿ ಗೌರವ ಹಾಗೂ ಕೌಶಲ್ಯ ವೃದ್ಧಿಸಿಕೊಂಡು ಸಮಾಜಕ್ಕೆ ಆಸ್ತಿಯಾಗಿ ರೂಪುಗೊಳ್ಳಬೇಕು” ಎಂದರು.

ಸಮಾರಂಭದ ಮುಖ್ಯ ಅತಿಥಿಯಾಗಿ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ನಾವಡರು “ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಂಡು ಯಶಸ್ಸಿನ ಮೆಟ್ಟಿಲೇರಬೇಕು ದುರ್ವ್ಯಸನಗಳಿಂದ ದೂರವಿದ್ದು, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಸನ್ಮಾರ್ಗದಲ್ಲಿ ಜೀವನವನ್ನು ರೂಪಿಸಿಕೊಳ್ಳಬೇಕು.” ಎಂದು ಕರೆ ನೀಡಿದರು.

ಇನ್ನೋರ್ವ ಅತಿಥಿ ಮಣೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನಿಸ್ ಬಾಂಜೆಯವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧನೆ ನಡೆಸಲು ಹಿತವಚನ ನುಡಿದರು.

ಗೀತಾನಂದ ಫೌಂಡೇಶನ್ ವತಿಯಿಂದ ಸ್ಥಳೀಯ ಪದವಿಪೂರ್ವ ಕಾಲೇಜಿನಿಂದ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶುಲ್ಕ ವಿತರಣೆಯೂ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್ ನಾಯಕ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂ‌ಎಸಿ ಸಂಚಾಲಕರಾದ ಪ್ರೊ.ಸುಬ್ರಮಣ್ಯ ಎ, ಸ್ಥಳೀಯ ಉದ್ಯಮಿಗಳಾದ ಮಹೇಶ್ ಪೂಜಾರಿ, ಶಿಕ್ಷಕ ರಕ್ಷಕ ಸಮಿತಿಯ ಅಧ್ಯಕ್ಷರಾದ ಶ್ರೀ.ಸುರೇಶ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುದಿನ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ತ್ರಿಶಾ, ಸಾಗರ್, ಸುಪ್ರೀತಾ, ಸೃಷ್ಟಿ ಚಂದನ್, ಶ್ರದ್ಧಾ , ಆಕಾಶ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಮೇಶ ಆಚಾರ್ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು , ಸಾಂಸ್ಕೃತಿಕ ಸಂಚಾಲಕರಾದ ಪ್ರೊ.ಶಂಕರ ನಾಯ್ಕ್ ವಂದಿಸಿದರು. ಉಪನ್ಯಾಸಕಿ ಡಾ. ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!