spot_img
Thursday, March 12, 2026
spot_img

ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸಿ. ರಮಾನಂದ ಭಟ್ ಪುನರಾಯ್ಕೆ

ಕೋಟ: ವಿವೇಕ ವಿದ್ಯಾಸಂಸ್ಥೆಗಳ ಮಹಾತ್ಮಾ ಗಾಂಧಿ ಸ್ಮಾರಕ ಭವನದಲ್ಲಿ ನಡೆದ ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಇತ್ತೀಚೆಗೆ ನಿವೃತ್ತರಾದ ಸಂಸ್ಕೃತ ಉಪನ್ಯಾಸಕ ಸಿ.ಮಂಜುನಾಥ ಉಪಾಧ್ಯ, ಬಾಲಕಿಯರ ಪ್ರೌಢಶಾಲೆಯ ಮುಖ್ಯಶಿಕ್ಷಕ ಕೆ.ಜಗದೀಶ ಹೊಳ್ಳ ಮತ್ತು ಸಮಾಜ ಶಾಸ್ತ್ರ ಉಪನ್ಯಾಸಕ ಅಶೋಕ್ ಕುಮಾರ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ವಿವೇಕ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವ್ಯಾಸಂಗವನ್ನು ಮಾಡುತ್ತಿರುವ ಸಂಸ್ಥೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಾಧಕರನ್ನು ಹಾಗೂ ದ್ವಿತೀಯ ಪಿ.ಯು.ಸಿ.ಯ ಮೂರೂ ವಿಭಾಗಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರನ್ನು ಅವರ ಪೋಷಕರ ಸಮ್ಮುಖದಲ್ಲಿ ನಗದು ಬಹುಮಾನ ನೀಡಿ ಪುರಸ್ಕಾರಿಸಲಾಯಿತು.

ಸಂಘದ ಅಧ್ಯಕ್ಷ ಸಿ.ರಮಾನಂದ ಭಟ್ಟರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವಾಧ್ಯಕ್ಷ ಜಗದೀಶ ನಾವಡ ನಿವೃತ್ತರ ಕುರಿತು ಅಭಿನಂದನೆಯ ನುಡಿಗಳನ್ನಾಡಿದರು.

ಶೈಲಜಾ ಉರಾಳರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಪ್ರೊ. ಎಚ್.ವಿ. ಸೋಮಯಾಜಿ ಸ್ವಾಗತಿಸಿದರು. ಕಾರ್ಯದರ್ಶಿ ಪಿ.ಸುಧಾಕರ್ ವಾರ್ಷಿಕ ವರದಿಯನ್ನು, ಕೋಶಾಧಿಕಾರಿ ಪಿ. ಪ್ರಕಾಶ್ ಹೇರ್ಳೆ ಆಯ-ವ್ಯಯ ಪತ್ರವನ್ನು ಮಂಡಿಸಿದರು.ಪಿ.ಮಂಜುನಾಥ ಉಪಾಧ್ಯ ಪ್ರತಿಭಾ ಪುರಸ್ಕಾರ ನಡೆಸಿ ಕೊಟ್ಟರು.ನಿವೃತ್ತರಾಗುವ ಸದಸ್ಯರ ಸ್ಥಾನದಲ್ಲಿ ಹೊಸ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಜಿ.ಸಂಜೀವ ಸಂಯೋಜಿಸಿದ ಕಾರ್ಯಕ್ರಮದಲ್ಲಿ ಗೌರವ ಉಪಾಧ್ಯಕ್ಷರಾದ ವೆಂಕಟೇಶ ಉಡುಪ, ಪ್ರೇಮಾನಂದ್ ಮತ್ತು ಪ್ರೀತಿ ರೇಖಾ ಉಪಸ್ಥಿತರಿದ್ದರು.

ಮಹಾಸಭೆಯ ನಂತರ ನಡೆದ ಮೊದಲ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಿ.ರಮಾನಂದ ಭಟ್ ಇವರನ್ನು ಅಧ್ಯಕ್ಷರಾಗಿ ಸರ್ವಾನುಮತದಿಂದ ಆರಿಸಲಾಯಿತು. ಕೋಶಾಧಿಕಾರಿಯಾಗಿ ಪಂಜು ಪೂಜಾರಿಯವರು ಆಯ್ಕೆಯಾದರು. ಉಳಿದಂತೆ ಕಳೆದ ಸಾಲಿನ ಪದಾಧಿಕಾರಿಗಳನ್ನು ಮುಂದುವರಿಸಲು ತೀರ್ಮಾನಿಸಲಾಯಿತು. ಶ್ರೀಪತಿ ಹೇರ್ಳೆ ನಿರೂಪಿಸಿ  ವೈ.ಸದಾರಾಮ ಹೇರ್ಳೆ ಧನ್ಯವಾದ ಸಮರ್ಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!